ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ‘ಜನತಾ ದರ್ಶನ’..

ಬೆಂಗಳೂರು: ಇನ್ನು ಮುಂದೆ ಪ್ರತಿ ತಿಂಗಳು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಹೌದು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಸೂಕ್ತ ಪರಿಹಾರ ಒದಗಿಸಲು ಪ್ರತಿ ತಿಂಗಳು ಜಿಲ್ಲಾಮಟ್ಟದಲ್ಲಿ ‘ಜನತಾ ದರ್ಶನ’ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರು ಎಲ್ಲ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ 25ರಂದು ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯಾ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ಜನತಾ ದರ್ಶನ ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಆಯಾ ಜಿಲ್ಲಾಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮನ್ವಯ ಸಾಧಿಸಿಕೊಂಡು ಜನತಾ ದರ್ಶನಕ್ಕೆ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು.ಈ ಕುರಿತು ಸಾರ್ವಜನಿಕರಿಗೆ ತಿಳಿಯುವಂತೆ ಮುಂಚಿತವಾಗಿ ಪ್ರಚಾರ ನಡೆಸಬೇಕು ಎಂದು ತಿಳಿಸಿದ್ದಾರೆ.

 

Related posts

 ಓರ್ವ ಸ್ವಾಮೀಜಿ ಮತ್ತು ರಾಜ್ಯದ ಮೂವರು ಸಚಿವರಿಗೆ ಜೀವಬೆದರಿಕೆ ಪತ್ರ.

ಸರ್ಕಾರಿ ಜಾಗಗಳಲ್ಲಿ ಅಂಗನವಾಡಿಗಳನ್ನು ನಿರ್ಮಿಸಬೇಕು:ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಮನವಿ

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂಗಳು, ಸಚಿವರು ಭಾಗಿ.