ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಇಂದು ಕಾಂಗ್ರೆಸ್ ಸೇರಲಿದ್ದಾರೆ ಶಿವಮೊಗ್ಗದ  ಜೆಡಿಎಸ್ ಮತ್ತು ಬಿಜೆಪಿ ಮುಖಂಡರು.

ಬೆಂಗಳೂರು:  ರಾಜ್ಯದಲ್ಲಿ ಪಕ್ಷಾಂತರ ವಿಚಾರ ಇದೀಗ ಸಾಕಷ್ಟು ಸದ್ದು ಮಾಡುತ್ತಿದ್ದು.  ಈ ಹಿಂದೆ ಬಿಜೆಪಿ ಸೇರಿದ್ದ ವಲಸೆ ಶಾಸಕರಲ್ಲಿ ಕೆಲವರು ಮತ್ತೆ ವಾಪಸ್ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ ಇಂದು  ಕೆಲ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ

ಕಳೆದ ವಿಧಾಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಆಯನೂರು ಮಂಜುನಾಥ್​ ಇದೀಗ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ಮುಖಂಡ ಶಿಕಾರಿಪುರ ನಾಗರಾಜ್ ಗೌಡ​ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಇನ್ನು ಎಸ್​.ಟಿ.ಸೋಮಶೇಖರ್​ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು  ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ 15ಕ್ಕೂ ಅಧಿಕ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾಹಿತಿ  ಲಭ್ಯವಾಗಿದೆ.

Related posts

ಪ್ರತಿಯೊಬ್ಬರಲ್ಲಿಯೂ ಸ್ವಚ್ಛತಾ ಜಾಗೃತಿ ಅವಶ್ಯಕ-ಸಿ.ರಾಜು

ಪ್ರಕೃತಿಯ ವಿಸ್ಮಯವು ಛಾಯಾಚಿತ್ರಗಳಲ್ಲಿ ಸೆರೆ- ಡಾ. ಶೇಖರ್ ಗೌಳೇರ್

ರಾಜ್ಯ ಸರ್ಕಾರ  ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ- ಮಾಜಿ ಸಿಎಂ ಬಿಎಸ್ ವೈ ಸಲಹೆ.