ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಭದ್ರಾವತಿಯ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನ.5 ರಂದು ಸಿಎಂಗೆ ಮನವಿ- ಜೆಡಿಯು ಮುಖಂಡ ಶಶಿಕುಮಾರ್ ಗೌಡ

ಶಿವಮೊಗ್ಗ:ಭದ್ರಾವತಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.5ರಂದು ವಿಐಎಸ್‍ಎಲ್ ಕಾರ್ಖಾನೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಜೆಡಿಯು ಮುಖಂಡರ ಶಶಿಕುಮಾರ್ ಗೌಡ ತಿಳಿಸಿದರು.
ಅವರು ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಭದ್ರಾವತಿಗೆ ಆಗಮಿಸಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಭದ್ರಾವತಿಯ ಎಂಪಿಎಂ ಹಾಗೂ ವಿಐಎಸ್‍ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದಾಗಿ ಭರವಸೆ ನೀಡಿದಂತೆ ಪುನಶ್ಚೇತನಗೊಳಿಸುವಂತೆ ಒತ್ತಾಯಿಸಲಾಗುವುದು ಎಂದರು.
ಭದ್ರಾವತಿಯ ಸಂಚಾರಿ ಠಾಣೆ ಪಿಎಸ್‍ಐ ಹಾಗೂ ಎಎಸ್‍ಐ ಜಯಲಕ್ಷ್ಮಿ ಅವರು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತು ಮಾಡುವಂತೆ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಇಲ್ಲಿವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಭದ್ರಾವತಿಯ ಕೆಎಸ್‍ಆರ್‍ಟಿಸಿ ಡಿಪೋಗೆ ಸೇರಿದ ಬಸ್ಸಿನ ಟೈರ್ ಕಳಚಿ ಅವಘಡ ಸಂಭವಿಸಿತ್ತು. ಈ ಅವಘಡಕ್ಕೆ ಡಿಪೋ ಮ್ಯಾನೇಜರ್ ನೇರ ಕಾರಣರಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು.
ಭದ್ರಾವತಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ಹಾಗೂ ತಾಲೂಕಿನಾದ್ಯಂತ ಮಾನ್ಯತೆ ಪಡೆಯದ ಅನೇಕ ಕ್ಲಿನಿಕ್‍ಗಳು ರಾಜಾರೋಷವಾಗಿ ನಡೆಯುತ್ತಿವೆ. ಇವುಗಳ ಬಗ್ಗೆ ಸಾಕ್ಷಿ ಸಮೇತ ದೂರು ನೀಡಿದ್ದರೂ ಡಿಹೆಚ್‍ಒರವರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಮೇಲ್ಕಂಡ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹಾಗೂ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಅಂದು ಮನವಿ ಸಲ್ಲಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ತ್ಯಾಗರಾಜ್, ವಿನೋದ್, ದಿವ್ಯಶ್ರೀ ಉಪಸ್ಥಿತರಿದ್ದರು.

Related posts

ವಿಶ್ವದ ಟಾಪ್ 10 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಗೆ 7 ನೇ ಸ್ಥಾನ

TOD News

ಹಿಂದೂ ಧರ್ಮದಿಂದಾಗಿಯೇ ಭಾರತದಲ್ಲಿ ಎಂದಿಗೂ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿಲ್ಲ- ಮೋಹನ್ ಭಾಗವತ್.

ಅಸಂಖ್ಯಾತ ರಾಷ್ಟ್ರ ಭಕ್ತರ ಹೋರಾಟದಿಂದ ದೇಶ ಸ್ವಾತಂತ್ರ್ಯ- ಸಿ.ಮಂಜುನಾಥ್