ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಜತೆ ಸಂಯಮ ವೃದ್ಧಿ-ಕೆ.ಗಂಗಪ್ಪಗೌಡ

ಶಿವಮೊಗ್ಗ: ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಶಿಕ್ಷಣ ವ್ಯವಸ್ಥೆಯು ವ್ಯಕ್ತಿತ್ವ ನಿರ್ಮಾಣದ ಜತೆಯಲ್ಲಿ ಸಂಯಮ ವೃದ್ಧಿಸುವಂತೆ ಮಾಡುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪಗೌಡ ಹೇಳಿದರು.

ಹುಂಚದ ಅತಿಶಯ ಕ್ಷೇತ್ರ ಹೊಂಬುಜ ದೇವಸ್ಥಾನದ ಆವರಣದಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ಸ್ಕೌಟ್ ಗೈಡ್, ಕಬ್, ಬುಲ್ ಗೈಡ್, ಕ್ಯಾಪ್ಟನ್, ಸ್ಕೌಟ್ ಮಾಸ್ಟರ್, ಬುಲ್, ಫ್ಲಾಕ್ ಲೀಡರ್ ಗಳಿಗೆ ಏಳು ದಿನಗಳ ಕಾಲ ಜಿಲ್ಲಾ ಮಟ್ಟದ ತರಬೇತಿ ಶಿಬಿರದಲ್ಲಿ ಮಾತನಾಡಿದರು.

ವಿದ್ಯಾಭ್ಯಾಸದ ಜತೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ನಲ್ಲಿ ಮಕ್ಕಳು ಪಾಲ್ಗೊಳ್ಳಬೇಕು. ಇದರಿಂದ ಮಕ್ಕಳ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಮಾನವೀಯ ಗುಣಗಳನ್ನು ಮೈಗೂಡಿಸುತ್ತದೆ. ವಿದ್ಯಾರ್ಥಿಗಳು ಸಮಾಜದ ಶಕ್ತಿಯಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಸ್ಕೌಟ್ ಮತ್ತು ಗೈಡ್ಸ್ನಲ್ಲಿ ಭಾಗವಹಿಸುವುದರಿಂದ ನಮ್ಮ ಬೆಲೆ ಗೌರವ ಹೆಚ್ಚಾಗುವುದರ ಜತೆಯಲ್ಲಿ ಆತ್ಮತೃಪ್ತಿ ಸಿಗುತ್ತದೆ. ಸೇವಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಪ್ರಧಾನ ಆಯುಕ್ತ ಎಚ್.ಡಿ.ರಮೇಶ್ ಶಾಸ್ರ್ತೀ ಭಾಗವಹಿಸಿದ್ದ ಎಲ್ಲ ಶಿಬಿರಾರ್ಥಿಗಳಿಗೂ ವೈಯುಕ್ತಿಕವಾಗಿ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು.

ದೇಶದ ಉತ್ತಮ ಪ್ರಜೆಗಳಾಗಿ ಹಾಗೂ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಸ್ಕೌಟ್ ಮತ್ತು ಗೈಡ್ ತರಬೇತಿ ಪಡೆದು ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು. ಸದೃಢ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.

ತರಬೇತಿ ತಂಡದ ಎಚ್.ಶಿವಶಂಕರ್, ಮಲ್ಲಿಕಾರ್ಜುನ ಕಾನೂರು, ಸಿ.ಎಂ.ಪರಮೇಶ್ವರಯ್ಯ, ಸಂಧ್ಯಾರಾಣಿ, ಮೀನಾಕ್ಷಮ್ಮ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ.

ಸರ್ವಾಂಗೀಣ ವಿಕಾಸ ಮಹಿಳಾಶ್ರಮದ ಧ್ಯೇಯ- ಅನಿತಾ ನಾಗೇಂದ್ರ 

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ