ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿವಮೊಗ್ಗದಲ್ಲಿ ಆಯುಷ್ ವಿವಿ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು-ಕಲ್ಲೂರು ಮೇಘರಾಜ್ ಆಗ್ರಹ.

ಶಿವಮೊಗ್ಗ: ಶಿವಮೊಗ್ಗದಲ್ಲಿ ಆಯುಷ್ ವಿವಿ ಸ್ಥಾಪಿಸಲು ಸರ್ಕಾರ ನಿರ್ಲಕ್ಷ್ಯ ಮಾಡದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖ್ಯಸ್ಥ ಕಲ್ಲೂರು ಮೇಘರಾಜ್ ಹೇಳಿದರು.
ಅವರು ಇಂದು ಮೀಡಿಯಾ ಹೌಸ್‍ನಲ್ಲಿ ನ ಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಶಿವಮೊಗ್ಗಕ್ಕೆ ಆಯುಷ್ ವಿವಿಯನ್ನು ತೆರೆಯಲು ಒಪ್ಪಿ ಮಂಜೂರು ಮಾಡಿದ್ದರು. ಅವರ ನಂತರ ಅಧಿಕಾರಕ್ಕೆ ಬಂದಿದ್ದ ಬಸವರಾಜ ಬೊಮ್ಮಾಯಿಯವರು ಸಹ ಬಜೆಟ್‍ನಲ್ಲಿ 500 ಕೋಟಿ ರೂ. ಮೀಸಲಿಟ್ಟು, 20 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದರು. ಜೊತೆಗೆ ವಿವಿಗೆ ಡಾ. ಲೋಕೇಶ್ ಎಂಬುವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನೇಮಿಸಿದ್ದರು ಎಂದರು.
ಆದರೆ ಬದಲಾದ ಪರಿಸ್ಥಿತಿಯಲ್ಲಿ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಿವಮೊಗ್ಗದಲ್ಲಿ ಆಯುಷ್ ವಿವಿ ಸ್ಥಾಪನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿ ಎಳ್ಳುನೀರು ಬಿಟ್ಟಿದೆ ಎಂದು ಆರೋಪಿಸಿದರು.
ಅಲ್ಲದೆ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಡಾ. ಲೋಕೇಶ್ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ಕಾರವಾರಕ್ಕೆ ವರ್ಗಾವಣೆ ಮಾಡಲಾಗಿತ್ತು. ಆ ಸ್ಥಾನ ಈಗ ಖಾಲಿಯಾಗಿಯೇ ಇದೆ. ಈ ಸ್ಥಾನಕ್ಕೆ ಯಾವ ಅಧಿಕಾರಿಯನ್ನೂ ನೇಮಕ ಮಾಡದೆ ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿತನ ಪ್ರದರ್ಶಿಸಿದೆ. ಇದು ಬಿಜೆಪಿ ಸರ್ಕಾರದ ಯೋಜನೆ. ನಾವೇಕೆ ಮಾಡಬೇಕು ಎಂಬ ಭಾವನೆ ಈಗಿನ ಸರ್ಕಾರಕ್ಕಿದೆ ಎಂದು ಕಾಣುತ್ತದೆ ಎಂದರು.
ಇಡೀ ರಾಜ್ಯದಲ್ಲಿಯೇ ಇದು ಪ್ರಥಮ ಆಯುಷ್ ವಿವಿಯಾಗುತ್ತದೆ. ನಾಲ್ಕು ಸರ್ಕಾರಿ ಆಯುಷ್ ಕಾಲೇಜುಗಳು, ಎರಡು ಅನುದಾನಿತ ಕಾಲೇಜುಗಳು, 70 ಖಾಸಗಿ ಕಾಲೇಜುಗಳು ಸೇರಿದಂತೆ ಯೋಗ, ಆಯುಷ್, ಮುಂತಾದ ವಿವಿಧ ಬಗೆಯ 79 ಕಾಲೇಜುಗಳು ಇದರ ವ್ಯಾಪ್ತಿಗೆ ಬರುತ್ತವೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸಬೇಕು. ಆಯುಷ್ ವಿವಿಗೆ ವಿಶೇಷ ಕರ್ತವ್ಯಾಧಿಕಾರಿ ನೇಮಕ ಮಾಡಬೇಕು. ಅಗತ್ಯ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನರಸಿಂಹಮೂರ್ತಿ, ನಾಗೇಶ್ ರಾವ್, ಶಂಕ್ರ ನಾಯ್ಕ ಇದ್ದರು.

Related posts

ಬುಧ ಗ್ರಹದಲ್ಲಿ ಉಪ್ಪು ಹಿಮನದಿ ಇರುವ ಪುರಾವೆಗಳು ಪತ್ತೆ..

ಬೆಂಗಳೂರು ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ  ಗುರುಪುರದ ಬಿ ಜಿ ಎಸ್ ಶಾಲೆಗೆ ಬಂಗಾರದ ಪದಕ

ಬಿಜೆಪಿಯಲ್ಲಿ ದುಡ್ಡು ಕೊಟ್ಟು ಟಿಕೆಟ್ ಪಡೆಯುವ ಸಂಸ್ಕೃತಿ ಇಲ್ಲ- ಮಾಜಿ ಸಚಿವ ಅರಗ ಜ್ಞಾನೇಂದ್ರ.