ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಏಳು ಭಾಷೆಗಳಲ್ಲಿ ‘ಕಾಂತಾರ-1’ ಫಸ್ಟ್ ಲುಕ್, ಟೀಸರ್  ಬಿಡುಗಡೆ

ಉಡುಪಿ: ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಹಿಟ್ ಆದ ಬಳಿಕ ಇದೀಗ ಕಾಂತಾರ-1 ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು ಇಂದು ಮುಹೂರ್ತ ಕಾರ್ಯಕ್ರಮ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ನೆರವೇರಿತು.

ಕಾಂತಾರ-1 ಸಿನಿಮಾಗೆ ಮುಹೂರ್ತ ಬೆನ್ನಲ್ಲೆ 7 ಭಾಷೆಗಳಲ್ಲಿ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. 7 ಭಾಷೆಯಲ್ಲೂ ಪೋಸ್ಟರ್‌ ರಿಲೀಸ್‌ ಮಾಡಲಾಗಿದ್ದು,  ಅಜನೀಶ್‌ ಅವರ ಮ್ಯೂಸಿಕ್‌ ಟೀಸರ್‌ ನಲ್ಲಿ ವೀಕ್ಷಕರನ್ನು ರೋಮಾಂಚನಗೊಳಿಸಿದೆ.

ಚಿತ್ರ ಮುಹೂರ್ತ ಬಳಿಕ ಮಾತನಾಡಿರುವ  ನಟ ರಿಷಬ್ ಶೆಟ್ಟಿ, ಡಿಸೆಂಬರ್ 2ನೇ ವಾರದಲ್ಲಿ ಶೂಟಿಂಗ್ ಆರಂಭವಾಗಲಿದೆ. ಚಿತ್ರದ ಸ್ಕ್ರಿಪ್ಟ್ ವರ್ಕ್ ಕಂಪ್ಲೀಟ್ ಆಗಿದೆ.  ತಾಂತ್ರಿಕವಾಗಿ ಯಾವುದೇ ಬದಲಾವಣೆ ಇಲ್ಲ.  ಕೆಲ ಹೊಸ ಕಲಾವಿದರು ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂತಾರ’ ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಯಿತು. ಆ ಬಳಿಕ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗೆ ಡಬ್ ಆಗಿ ಬಿಡುಗಡೆ ಕಂಡಿತು. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗೆಲುವು ಕಂಡಿದ್ದು. ಈಗ ‘ಕಾಂತಾರ -1’ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮೂಡಿಬರುತ್ತಿದೆ.

Related posts

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವೆನೆ ಮಾಡಲ್ಲ ಯಾಕೆ..? ವೈಜ್ಞಾನಿಕ ಕಾರಣವೇನು ಗೊತ್ತೆ..?

ಅಮೆರಿಕಾ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ.

ಹೆಚ್. ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ.