ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಸಾಹಿತ್ಯ/ಸಂಸ್ಕೃತಿ

ಕರವೇ ನಾರಾಯಣಗೌಡ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು, ಜ.9: 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್‌ ನಾಳೆಗೆ ಮುಂದೂಡಿದೆ. ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಾರಾಯಣಗೌಡ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.

ಇಂದು ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ನಾರಾಯಣಗೌಡ ಪರ ವಕೀಲ ಕುಮಾರ್, ಪೊಲೀಸರ ನಿರ್ಲಕ್ಷದಿಂದ ಎನ್​ಬಿಡಬ್ಲ್ಯು ಜಾರಿಯಾಗಿದೆ. ನಾರಾಯಣಗೌಡರಿಗೆ ತಿಳಿಯದೇ ಹೀಗಾಗಿದೆ. ಒಂದು ವೇಳೆ ತಿಳಿದಿದ್ದರೆ ವಾಲೆಂಟರಿಯಾಗಿ ನ್ಯಾಯಾಲಯಕ್ಕೆ ಬರುತ್ತಿದ್ದರು. ಅವರು ಪ್ರತೀ ದಿನ ಎಲ್ಲರಿಗೂ ಸಿಗುವಂತ ವ್ಯಕ್ತಿ. ಅವರು ತಲೆಮರೆಸಿಕೊಂಡು ಹೋಗುವಂತ ವ್ಯಕ್ತಿ ಅಲ್ಲ. ಜೊತೆಗೆ ಅವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.

Related posts

ವಿದ್ಯಾರ್ಥಿಗಳು ಸಾಮಾಜಿಕ ಅಧ್ಯಯನಗಳಲ್ಲಿ ತೊಡಗಿಸಿಕೊಳ್ಳಿ-ಡಾ.ವೈ.ಎಂ.ಉಪ್ಪಿನ್

ರಾಜ್ಯದ ಹಲವೆಡೆ ಒಂದು ವಾರ ಮಳೆ- ಹವಮಾನ ಇಲಾಖೆ ಮುನ್ಸೂಚನೆ.

ಚಂದ್ರಯಾನ-3 ಯಶಸ್ವಿ: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ.