ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ – ರೈತ ಮುಖಂಡ ಕುರುಬೂರು ಶಾಂತಕುಮಾರ್ ಟೀಕೆ.

ಬೆಂಗಳೂರು:   ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನ ರಾಜ್ಯ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.

ಮೈಸೂರು ಬ್ಯಾಂಕ್ ಸರ್ಕಲ್ ​ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಕುರುಬೂರು ಶಾಂತಕುಮಾರ್ ಸೇರಿ ಪ್ರತಿಭಟನಕಾರರನ್ನ ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ. ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ. ನಮ್ಮ ಸರ್ಕಾರ ತಮಿಳುನಾಡಿಗೆ ನೀರು ಹರಿಸಿ ನೀರುಗಂಟಿ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಸದ್ಯದವರೆಗೂ ಬಂದ್ ಯಶಸ್ವಿಯಾಗಿದೆ. ಎಲ್ಲರೂ ಬೆಂಬಲ ನೀಡಿದ್ದಾರೆ. 144 ಸೆಕ್ಷನ್ ಹಾಕಬಾರದಿತ್ತು. ನಮ್ಮ ಹೋರಾಟ, ಚಳುವಳಿ ಇರಲಿದೆ ಎಂದರು.

Related posts

ಮುಂದೆ ರಾಷ್ಟ್ರ ಮತ್ತು ರಾಜ್ಯದ ರಾಜಕೀಯದಲ್ಲಿ ಅಸ್ಥಿರತೆ: ಕೋಡಿಮಠ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ-ವಾಗ್ಮಿ ರಾಯಚೂರು ಕೃಷ್ಣಾಚಾರ್

ದೇಶದ ಹೆಸರು ಭಾರತ ಎನ್ನುವುದು ಸರಿಯಾದ ನಿರ್ಧಾರ- ಶಾಸಕ ಅರಗ ಜ್ಞಾನೇಂದ್ರ.