ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ ಭಾಷಾ ಪ್ರೇಮ-ಪ್ರೊ. ಮಹಾಲಿಂಗಪ್ಪ

ಶಿವಮೊಗ್ಗ: ಕನ್ನಡ ಭಾಷಾ ಪ್ರೇಮವು ಕೇವಲ ಪಠ್ಯದಲ್ಲಿದ್ದರೆ ಸಾಲದು, ನಮ್ಮ ದಿನ ನಿತ್ಯದ ಜೀವನದಲ್ಲಿ ನಿತ್ಯೋತ್ಸವದ ಭಾಷೆಯಾಗಬೇಕು. ಕನ್ನಡ ಭಾಷೆಯನ್ನು ಸಂವಹನ ನಡೆಸಲು ಬಳಸಬೇಕು ಎಂದು ಅಜ್ಜಂಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಪ್ರೊ. ಮಹಾಲಿಂಗಪ್ಪ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ ವಿಭಾಗ, ಸಾಂಸ್ಕೃತಿಕ ವೇದಿಕೆ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ 50 ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ, ಕರ್ನಾಟಕ ಆಸ್ಮಿತೆಯನ್ನು ನಾವು ಅರಿಯಬೇಕಾದ ಅನಿವಾರ್ಯತೆ ಇದ್ದು, ನಾಡಿನ ವೈಶಿಷ್ಟ್ಯತೆಯನ್ನು ಹಾಗೂ ಕನ್ನಡ ಸಾಹಿತ್ಯದ ಇತಿಹಾಸವನ್ನು ಅರಿತುಕೊಳ್ಳಬೇಕು. ಕನ್ನಡದ ಶ್ರೇಷ್ಠ ಸಾಹಿತ್ಯದ ಕೊಡುಗೆಯನ್ನು ಪ್ರತಿಯೊಬ್ಬರು ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ಪ್ರತಿಯೊಬ್ಬ ಕನ್ನಡಿಗರು ಅತ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಾರೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಭಾಷೆಯ ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ. ಕುಮಾರಸ್ವಾಮಿ ಎನ್. ಮಾತನಾಡಿದರು. ಕನ್ನಡ ವಿಭಾಗ ಮುಖ್ಯಸ್ಥೆ ಪ್ರೊ. ಸಾವಿತ್ರಿ ಎಸ್.ಕೆ. ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ನೃತ್ಯಗಳ ಬಹುಮಾನ ವಿತರಣೆಯನ್ನು ಡಾ. ರಾಜೇಶ್ವರಿ ನಡೆಸಿಕೊಟ್ಟರು.

ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಪ್ರೊ. ಕೇತನ ಆರ್ತಿ ಎನ್., ಅಧೀಕ್ಷಕ ರಾಜೀವ್ ಎನ್. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಡಿ.ಬಿ.ಶಿವರುದ್ರಪ್ಪ ಸ್ವಾಗತಿಸಿದರು. ಡಾ. ಉಮೇಶ್ ಅಂಗಡಿ ವಂದನಾರ್ಪನೆ ನಡೆಸಿಕೊಟ್ಟರು. ವಿದ್ಯಾರ್ಥಿನಿ ರಂಜಿತಾ ಎಸ್.ವಿ. ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಎಲ್ಲ ಉಪನ್ಯಾಸಕರು, ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸರ್ಕಾರ ಮತ್ತು ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು- ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್

ಲೋಕಸಭೆ ಚುನಾವಣೆ  ನಮ್ಮ ಸವಾಲು: ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ- ಬಿವೈ ವಿಜಯೇಂದ್ರ.

ರಾಜಕಾರಣ ಎಂಬ ಆಗಸದಲ್ಲಿ ದಿ. ಬಂಗಾರಪ್ಪ ಮರೆಯಲಾಗದ ಧ್ರುವತಾರೆ-ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಬಣ್ಣನೆ