ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಲೋಕಸಭೆ ಚುನಾವಣೆ  ನಮ್ಮ ಸವಾಲು: ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ- ಬಿವೈ ವಿಜಯೇಂದ್ರ.

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆ ನಮ್ಮ ಗುರಿ. ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ  ಮೊದಲ ಬಾರಿಗೆ  ಶಿವಮೊಗ್ಗಕ್ಕೆ ಆಗಮಿಸಿದ ಬಿವೈ ರಾಘವೇಂದ್ರ ಅವರು ವಿಜಯೇಂದ್ರ ಅವರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು.  ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ, ಮುಂಬರುವ ಲೋಕಸಭಾ ಚುನಾವಣೆ ನಮ್ಮ ಮುಂದಿರುವ ಸವಾಲು. ಮತ್ತೊಮ್ಮೆ ಮೋದಿ ಅವರ ಕೈ ಬಲಪಡಿಸಬೇಕಿದೆ.  ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಹೇಳಿದ್ದಾರೆ.

ನೂತನವಾಗಿ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ ನವೆಂಬರ್ 15ರಂದು ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರು. ಬಳಿಕ ವಿಜಯೇಂದ್ರ  ಅವರು ಕೆ.ಎಸ್ ಈಶ್ವರಪ್ಪ ಮನೆಗೂ ಭೇಟಿ ನೀಡಿದ್ದಾರೆ. ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.

Related posts

ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಹೆಚ್ಚಳ.

 ಕಾಂಗ್ರೆಸ್ ಪಕ್ಷ  ಸಿದ್ಧಾಂತ ಒಪ್ಪಿ ಯಾರೇ ಬಂದ್ರೂ ಸ್ವಾಗತ-ಸಿಎಂ ಸಿದ್ದರಾಮಯ್ಯ.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ: ಅದರ ಕ್ರೆಡಿಟ್ ಕಾಂಗ್ರೆಸ್ಸಿಗೆ ಸೇರುತ್ತದೆ-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್