ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ-ವಿಜಯ್ ಸಾಯಿ

ಶಿವಮೊಗ್ಗ: ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ವಿಜಯ್ ಸಾಯಿ ಹೇಳಿದರು.
ಶಿವಮೊಗ್ಗ ನಗರದ ಗೋಪಾಳ ಭವನದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಎಸ್‌ಬಿಐ ಪೆನ್ಷನರ‍್ಸ್ ಕಮ್ಯೂನ್ ಸದಸ್ಯರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ನಿವೃತ್ತ ನೌಕರರಿಗೆ ಉಪಯುಕ್ತ ಆಗಲೆಂದು ಆಯೋಜಿಸಿರುವ ಆರೋಗ್ಯ ತಪಾಸಣಾ ಕಾರ್ಯಕ್ರಮ ಅತ್ಯಂತ ಶ್ಲಾಘನೀಯ. ಇದರಿಂದ ನೂರಾರು ಜನರಿಗೆ ಅನುಕೂಲವಾಗುತ್ತದೆ. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ತಂಡವು ನಿರಂತರವಾಗಿ ಇಂತಹ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ರಾಜು ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಸರ್ಕಾರಿ ಶಾಲೆಗಳಿಗೆ ನೆರವು ಸೇರಿದಂತೆ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಬರುತ್ತಿದೆ. ನಿವೃತ್ತ ನೌಕರರಿಗೆ ಅನುಕೂಲ ಒದಗಿಸಲು ವಿಶೇಷ ಶಿಬಿರ ನಡೆಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ದಂತ ತಪಾಸಣೆ, ಇಸಿಜಿ, ಮೂಳೆಗೆ ಸಂಬಂಧಪಟ್ಟ ತಪಾಸಣೆ, ಬಿಪಿ, ಶುಗರ್ ತಪಾಸಣೆ ಸೇರಿದಂತೆ ವಿವಿಧ ರೀತಿಯ ಪರೀಕ್ಷೆ ನಡೆಸಲಾಯಿತು. ಆರೋಗ್ಯ ಸದೃಢತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವೈದ್ಯರು ಸಲಹೆ ನೀಡಿದರು.
ಎಸ್‌ಬಿಐ ಪೆನ್ಷನರ‍್ಸ್ ಕಮ್ಯೂನ್ ಅಧ್ಯಕ್ಷ ಕೆ.ಟಿ.ಶ್ರೀನಿವಾಸ್, ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಕಾರ್ಯದರ್ಶಿ ಪ್ರಕಾಶಮೂರ್ತಿ, ಮಂಜುಳಾ ರಾಜು, ಶ್ರೀನಿವಾಸ ಪುರಾಣಿಕ್, ಶಿವಮೂರ್ತಿ, ಜಗದೀಶ್, ಮಮತಾ, ಡಾ. ಶ್ರೀನಿವಾಸ್, ಡಾ. ಶರತ್, ಡಾ. ಉಷಾ ಮತ್ತಿತರರು ಉಪಸ್ಥಿತರಿದ್ದರು.

Related posts

ಝಿಕಾ ವೈರಸ್ ಸೋಂಕು-ಭಯಬೇಡ ಎಚ್ಚರವಿರಲಿ: ಡಿಸಿ ಡಾ.ಸೆಲ್ವಮಣಿ

ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸಹಾಯಧನ ಭಾರಿ ಹೆಚ್ಚಳ

8ನೇ ಖಂಡವನ್ನು ಪತ್ತೆಹಚ್ಚಿದ ವಿಜ್ಞಾನಿಗಳು: ಇದರ ವಿಶೇಷತೆ ಏನು…?