ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನ.29ರವರೆಗೆ ಭಾರಿ ಮಳೆ-ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು: ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆ ಆಗದಿದ್ದರೂ ಹಿಂಗಾರು ಸ್ವಲ್ಪ ಚುರುಕುಗೊಂಡಿದೆ. ಈ ನಡುವೆ  ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ

ಬೆಂಗಳೂರಿನ ಹಲವು ಭಾಗಗಳಲ್ಲಿ ಬುಧವಾರ ಮಳೆಯಾಗಿದ್ದು, ಇಂದು ಸಹ ವರುಣನ ಆಗಮನವಾಗಲಿದೆ. ಇನ್ನು ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು,  ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.

Related posts

ಇಸ್ಕಾನ್ ಭಾರತದ ಅತೀ ದೊಡ್ಡ ವಂಚಕ ಸಂಸ್ಥೆ: ಗೋರಕ್ಷಣೆ ಹೆಸರಲ್ಲಿ ಗೋವುಗಳನ್ನು ಕಟುಕರಿಗೆ ಮಾರಾಟ- ಮನೇಕಾ ಗಾಂಧಿ

ಮಾಜಿ ಸಿಎಂ ದಿ. ಎಸ್. ಬಂಗಾರಪ್ಪ ಜನ್ಮದಿನಾಚಾರಣೆ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಉಪಾಹಾರ ವಿತರಣೆ.

ಪದವೀಧರರಿಗೆ ಗುಡ್ ನ್ಯೂಸ್ : 8283 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ SBI