ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ : ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು:  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಸ್ವಲ್ಪ ಶೀತ ವಾತಾವರಣ ಹೆಚ್ಚಿರುವ ಬಗ್ಗೆಯೂ ಹವಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ದಕ್ಷಿಣ ಕನ್ನಡ,  ಉತ್ತರ ಕನ್ನಡ, ಉಡುಪಿ, ಬೀದರ್,  ಧಾರವಾಡ,  ಗದಗ, ಹಾವೇರಿ, ಕೊಪ್ಪಳ ವಿಜಯಪುರ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,  ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 2ರವರೆಗೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.  ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Related posts

ಒಂದು ದೇಶ ಒಂದು ಚುನಾವಣೆ: ಖರ್ಚು ಎಷ್ಟಾಗುತ್ತೆ..? ಸಾಧಕ ಬಾಧಕಗಳೇನು..?

ಆಕಾಶವಾಣಿಯಲ್ಲಿ ನವದೇವಿ ದರ್ಶನ- ನವರಾತ್ರಿ ವಿಶೇಷ ಕಾರ್ಯಕ್ರಮ ಸರಣಿ

ಪತ್ರಕರ್ತ, ಸಾಹಿತಿ ಶಿ.ಜು.ಪಾಶ ಅವರಿಗೆ ಡಾ.ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ.