ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗೃಹಲಕ್ಷ್ಮೀ ಹಣ ಜಮೆಯಾಗದ ಆರೋಪ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದ ಬಗ್ಗೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತ ಗೊಂದಲಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರೆ ಎಳೆದಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ,ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ. 5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ‌ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9‌.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆ‌ಯಾಗಿಲ್ಲ ಎಂದು  ಮಾಹಿತಿ ನೀಡಿದರು.

ಇನ್ನು ಹಣ ಜಮೆಯಾಗದಿರುವುದಕ್ಕೆ ಕಾರಣ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  3082 ಅರ್ಜಿದಾರರು ಮರಣ ಹೊಂದಿದ್ದು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೀತಿದೆ ಎಂದು ತಿಳಿಸಿದ್ದಾರೆ.

ಇನ್ನು ಸೆಪ್ಟೆಂಬರ್​ನಲ್ಲಿ 1ಕೋಟಿ 14ಲಕ್ಷ ಜನ ಗೃಹಲಕ್ಷ್ಮೀ ‌ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್ ​​ನಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿ 2280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Related posts

ಏಳು ಭಾಷೆಗಳಲ್ಲಿ ‘ಕಾಂತಾರ-1’ ಫಸ್ಟ್ ಲುಕ್, ಟೀಸರ್  ಬಿಡುಗಡೆ

ಬೆಂಗಳೂರಿನ ಪೀಣ್ಯ ಫ್ಲೈಓವರ್​ ಮತ್ತೆ 4 ದಿನಗಳ ಕಾಲ ಬಂದ್

TOD News

ಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ: ಬಿಎಸ್ ವೈ ವಿರುದ್ಧ ವೈ.ಬಿ. ಚಂದ್ರಕಾಂತ್ ಕಿಡಿ