ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಎಲ್ಲ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ-ಸಚಿವ ಮಧು ಬಂಗಾರಪ್ಪ ಭರವಸೆ

ಶಿವಮೊಗ್ಗ: ಸರ್ಕಾರದ ಆರ್ಥಿಕ ಇತಿಮಿತಿ ನೋಡಿಕೊಂಡು ಅನುದಾನಿತ ಶಾಲಾ ಕಾಲೇಜುಗಳ ನೌಕರರ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ನಗರದ ತೇವರಚಟ್ನಳ್ಳಿ ಪೇಸ್ ಕಾಲೇಜಿನಲ್ಲಿ ಭಾನುವಾರ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ “ನೌಕರರ ಸಂಘದಿಂದ ನಿಶ್ಚಿತ ಪಿಂಚಣಿ ಅನುμÁ್ಠನ ಮತ್ತು ಅನುದಾನಿತ ನೌಕರರ ಪಿಂಚಣಿ ಸೇವಾ ನಿಯಂತ್ರಣ ಕಾಯ್ದೆ-2014 ರದ್ದುಗೊಳಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಪಿಂಚಣಿ ವಿಚಾರದಲ್ಲಿ ಚುನಾವಣಾಪೂರ್ವ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನೂರಕ್ಕೆ ನೂರು ಈಡೇರಿಸುತ್ತೇವೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೂ ಒಪ್ಪಿಸುತ್ತೇನೆ. ಅನುದಾನಿತ ಶಾಲಾ ಕಾಲೇಜುಗಳ ನೌಕರರನ್ನು ಪಿಂಚಣಿ ವ್ಯವಸ್ಥೆಗೆ ಒಳಪಡಿಸುವಂತೆ ಮಾಡುವುದು ನನ್ನ ಜವಾಬ್ದಾರಿ ಎಂದರು.
ನ.9ರಂದು ಸಂಪುಟ ಸಭೆ ಅಂದು ಬೆಳಗ್ಗೆಯೇ ಅಧಿಕಾರಿಗಳ ಜತೆ ಚರ್ಚಿಸಿ ಸಭೆಯಲ್ಲೂ ಸಿಎಂ, ಡಿಸಿಎಂ ಗಮನಕ್ಕೆ ಮತ್ತೊಮ್ಮೆ ತರಲಾಗುವುದು, ಸರ್ಕಾರ ಕೂಡ ಒಂದು ಮನೆ ಇದ್ದಂತೆ, ಅಲ್ಲಿನ ಇತಿಮಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳತ್ತ ಮಕ್ಕಳು ಓಡೋಡಿ ಬರುವಂತೆ ಮಾಡುತ್ತೇನೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೀಗ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. 2015ರಿಂದ 2023ರವರೆಗೆ ಖಾಲಿ ಹುದ್ದೆಗಳ ಭಿರ್ತಿಗೆ ಸಿಎಂ ಒಪ್ಪಿಗೆ ಕೊಟ್ಟಿದ್ದಾರೆ. ಕಾನೂನು ಮೀರಿ ಯಾವುದನ್ನೂ ಮಾಡುವುದಿಲ್ಲ. ಸಾಧ್ಯವಾದರೆ ಕಾನೂನಿಗೆ ತಿದ್ದುಪಡಿ ತಂದು ಜನರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಸಂಗೀತ ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ಒಳಗೊಂಡಂತೆ ಇನ್ನೂ 20 ಸಾವಿರ ಶಿಕ್ಷಕರ ಬೇಡಿಕೆ ಇದೆ. ಮುಂದಿನ ವರ್ಷ 600 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. 5ರಿಂದ 6 ಕಿ.ಮೀ. ವ್ಯಾಪ್ತಿಯಲ್ಲಿ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಶಾಸಕ ರಘುಪತಿ ಭಟ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಮರಿತಿಬ್ಬೇಗೌಡ, ಹನುಮಂತ ನಿರಾಣಿ, ಚಿದಾನಂದ ಗೌಡ, ಮಾಜಿ ಎಂಎಲ್ ಕೆ.ಟಿ. ಶ್ರೀಕಂಠೇಗೌಡ, ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ತೇಜಿ, ಶಿವಮೊಗ್ಗ ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್, ಬಿಇಒ ನಾಗರಾಜ್, ಮುಖಂಡರಾದ ರಾಮು ಗುಗವಾಡ, ಟಿ.ರವಿಕುಮಾರ್, ಎಂ.ಕೆ. ರಾಜು, ಎನ್.ರಾಜಗೋಪಾಲ್ ಮತ್ತಿತರರು ಇದ್ದರು.

Related posts

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಕರುನಾಡು ಸಂರಕ್ಷಣಾ ವೇದಿಕೆ ಪ್ರತಿಭಟನೆ.

ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ  ತನಕ ನೀವೇ ನಾಯಕತ್ವ ವಹಿಸಿಕೊಳ್ಳಿ- ಬಿಎಸ್ ವೈಗೆ ಬಿಜೆಪಿ ಶಾಸಕರಿಂದ ಒತ್ತಾಯ

ಇನ್ಮುಂದೆ ಎಸಿಗೆ ಜನನ-ಮರಣ ನೋಂದಣಿ ತಿದ್ದುಪಡಿ ಅಧಿಕಾರ..