ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ದೇಶ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು- ಸಚಿವ ಮಧು ಎಸ್. ಬಂಗಾರಪ್ಪ

ಶಿವಮೊಗ್ಗ: ದೇಶ, ಭಾಷೆ, ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.
ಅವರು ಇಂದು ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಈ ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜಾತಿ, ಮತ, ಪಂತ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್ ಸಿಂಗ್, ಸುಭಾಸ್Àಂದ್ರ ಬೋಸ್, ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಹೋರಾಟಗಾರರ ತ್ಯಾಗದ ಫಲ ಇಂದಿನ ಸ್ವಾತಂತ್ರ್ಯ ದಿನಾಚರಣೆ ಎಂದರು.
ನಮ್ಮ ಜಿಲ್ಲೆಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದರು. ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಐವರು ಹೋರಾಟಗಾರರು ನೇಣಿಗೆ ಕೊರಳೊಡ್ಡಿ ಹುತಾತ್ಮರಾಗಿದ್ದು ನಿಜಕ್ಕೂ ನೋವಿನ ಸಂಗತಿ. ಆ ಎಲ್ಲಾ ಹೋರಾಟಗಾರನ್ನು ನೆನೆಯಬೇಕು ಎಂದರು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶವು ಎದುರಿಸುತ್ತಿದ್ದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನಾವು ಸಫಲರಾಗಿದ್ದೇವೆ. ಇಲ್ಲಿನ ಜನರ ಹಸಿವು, ಬಡತನ, ದಾರಿದ್ರ್ಯ, ಅನಕ್ಷರತೆ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು
ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಿದ್ದೇನೆ. ಶಾಲೆಗಳ ಆರಂಭದ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂಗಳನ್ನು ಪೂರೈಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕಗ್ಗಂಟಾಗಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್‍ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲಿ ಸದರಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಸರ್ಕಾರ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಬದ್ಧವಾಗಿದೆ. ಈಗಾಗಲೇ 1.4ಕೋಟಿಗೂ ಅಧಿಕ ಕುಟುಂಬಗಳು ಇದರ ಫಲಾನುಭವಿಗಳಾಗಿದ್ದಾರೆ.
ಸರ್ಕಾರ ರಚನೆ ಆಗಿ ಅಲ್ಪ ಸಮಯವಾಗಿದ್ದರೂ, ಸಾಧಿಸಿದ ಸಾಧನೆ ಅನೇಕ ಮೈಲುಗಲ್ಲುಗಳನ್ನು ನಿರ್ಮಿಸಿ ದೇಶಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿ ಅನುμÁ್ಠನಗೊಂಡ ಈ ಎಲ್ಲಾ ಯೋಜನೆಗಳು ದೇಶದಲ್ಲಿಯೇ ವಿಶೇಷ ಯೋಜನೆಗಳಾಗಿ ಗುರುತಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಹಾಗೂ ಸಂಸ್ಥೆಗಳಿಂದ ಪಥ ಸಂಚಲನ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಪಥಸಂಚಲನದಲ್ಲಿ ಬಹುಮಾನ ಪಡೆದ ತಂಡಗಳಿಗೆ ಗೌರವಿಸಲಾಯಿತು. ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತಂತೆ ಪ್ರಗತಿ ಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ ಪುಸ್ತಕ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರುಗಳಾದ ಎಸ್.ಎನ್. ಚನ್ನಬಸಪ್ಪ, ರುದ್ರೇಗೌಡ, ಡಿ.ಎಸ್ ಅರುಣ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಎಸ್‍ಪಿ ಮಿಥುನ್‍ಕುಮಾರ್, ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಹಲವು ಗಣ್ಯರಿದ್ದರು.

Related posts

ಆಸ್ಕರ್ ಪ್ರಶಸ್ತಿಗೆ ‘12th ಫೇಲ್’ ನಾಮನಿರ್ದೇಶನ..

ನಾಳಿನ ಕರ್ನಾಟಕ ಬಂದ್ ಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಬೆಂಬಲ

ವಿದ್ಯಾರ್ಥಿಗಳನ್ನು ಸನ್ಮಾರ್ಗದಲ್ಲಿ ಮುನ್ನಡೆಸುವವರು ಶಿಕ್ಷಕರು-ಸಿ.ರಾಜು