ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬರಗಾಲದ ಸಂದರ್ಭದಲ್ಲಿ ಮದ್ಯದಂಗಡಿ ತೆರೆಯಲು ಒಲವು ತೋರುತ್ತಿರುವುದು ದುರದೃಷ್ಟಕರ ಸಂಗತಿ-ಶಾಸಕ ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಬರಗಾಲದ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದ್ಯದಂಗಡಿ ತೆರೆಯಲು ಒಲವು ತೋರುತ್ತಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಸ್ಥಿತಿ ಎದುರಾಗಿದೆ. ಕೇಂದ್ರದಿಂದ ಬರ ಅಧ್ಯಯನ ತಂಡ ಬಂದಿದೆ. ಆದರೆ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಹೊರಟಿದೆ. ಇದು ಸರಿಯಲ್ಲ ಎಂದರು.
ಗ್ರಾಪಂ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆಯೇ ಸಾಕಷ್ಟು ಗೊಂದಲವಿದೆ. ಅದರ ನಡುವೆಯೇ ಸರ್ಕಾರ ಹೊಸ ಮದ್ಯದಂಗಡಿಗಳ ಲೈಸೆನ್ಸ್‍ಗೆ ಆದ್ಯತೆ ನೀಡುತ್ತಿದೆ. ಇದನ್ನು ರಾಜ್ಯದ ಜನರು ಗಂಭೀರವಾಗಿ ಗಮನಿಸುತ್ತಿದ್ದಾರೆ ಎಂದರು.

Related posts

ಅನುದಾನ ಹಿಂಪಡೆದಿದ್ದು ಮೇಲ್ನೋಟಕ್ಕೆ ದ್ವೇಷದ ರಾಜಕಾರಣ-ಮಾಜಿ ಸಿಎಂ ಬಿಎಸ್ ವೈ ಟೀಕೆ.

ಮಾನವೀಯತೆಯ ಸೂಕ್ಷ್ಮಗಳನ್ನು ಗಾಂಧಿಯಿಂದ ತಿಳಿಯಿರಿ-ಹಿರಿಯ ಸಾಹಿತಿ ಎಲ್.ಎನ್. ಮುಕುಂದರಾಜ್

ಗೋಲ್ಡನ್ ಸಿಂಗರ್ಸ್ ಇವೆಂಟ್: ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ರಂಜಿಸಿದ ಗಾಯಕರು.