ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲ್ಲ- ಶಾಸಕ ಎಸ್.ಟಿ ಸೋಮಶೇಖರ್.

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್,  ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ನಾನು ಕ್ಷೇತ್ರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೆ. ಕ್ಷೇತ್ರದ ವಿಚಾರವಾಗಿ ಸಿಎಂ ಭೇಟಿಯಾಗುವುದು ತಪ್ಪಾ? ಎಂದು ಪ್ರಶ್ನಿಸಿದರು.

ಪಕ್ಷದ ಕೆಲ ಮುಖಂಡರು ಕಾಂಗ್ರೆಸ್​ ಸೇರ್ತಾರೆಂದು ವದಂತಿ ಇದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಯುತ್ತಿದೆ. ಬಿಎಸ್ ವೈ ನನ್ನ ಜೊತೆ ಮಾತನಾಡಿದ್ದಾರೆ. ನನಗೆ ತಡವಾಗಿ ಮೆಸೇಜ್ ಸಿಕ್ಕಿದೆ ಎಂದು ಹೇಳಿದ್ದೇನೆ. ನನ್ನನ್ನ ಬಿಜೆಪಿಗೆ ಕರೆತಂದವರು ಬಿಎಸ್ ವೈ.  ಸಚಿವರನ್ನಾಗಿ ಮಾಡಿ ಮೈಸೂರು ಜಿಲ್ಲಾ ಉಸ್ತುವಾರಿ ನೀಡಿದ್ದರು. ಬಿಎಸ್ ವೈ ಅವರನ್ನು ಹೊರತಾಗಿ ನಾನು ಏನು ಮಾಡಲ್ಲ. ಮನೆಗೆ ಬನ್ನಿ ಎಂದು ಕರೆದಿದ್ದಾರೆ. ಬಿಎಸ್ ವೈ ಜೊತೆ ಮಾತನಾಡುತ್ತೇನೆ ಎಂದು ಎಸ್.ಟಿ ಸೋಮಶೇಖರ್ ತಿಳಿಸಿದರು.

Related posts

ಕಥೆ, ಕವನ, ಕಾದಂಬರಿಗಳ ಮೂಲಕ ವೈದ್ಯ ಸಾಹಿತ್ಯವನ್ನು ಜನರಿಗೆ ತಲುಪಿಸಿ: ಡಾ.ಶ್ರೀಧರ್ ಕರೆ

ಸರ್ಕಾರದಿಂದ “ಪೆಹಲಾ ಓಟ್” ಅಭಿಯಾನಕ್ಕೆ ಚಾಲನೆ: ಏನಿದು ಪೆಹಲಾ ಓಟ್..?

ಸಿರಿಧಾನ್ಯಗಳ ಬಳಕೆಯ ಅರಿವು ಮೂಡಿಸುವುದು ಅವಶ್ಯಕ-ಉದ್ಯಮಿ ಚಂದ್ರಹಾಸ್ ಶೆಟ್ಟಿ