ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನಲ್ಲಿ ಈ ವರ್ಷ 1800ಕ್ಕೂ ಹೆಚ್ಚು ಗರ್ಭಪಾತ, ಕಾರಣ ಕೇಳಿ ನೋಟಿಸ್

ಮೈಸೂರು, ಡಿ.17: ಮೈಸೂರಿನಲ್ಲಿ ಭ್ರೂಣ ಹತ್ಯೆ, ಪತ್ತೆ ಜಾಲ ದೊಡ್ಡ ಮಟ್ಟದಲ್ಲಿ ಕಂಡು ಬರ್ತಿದ್ದಂತೆ ಆರೋಗ್ಯಾಧಿಕಾರಿಗಳು ಫುಲ್​ ಅಲರ್ಟ್ ಆಗಿದ್ದಾರೆ. ಮೈಸೂರಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮೈಸೂರು ಜಿಲ್ಲೆಯಲ್ಲಿ ಈವರೆಗೂ 15 ಖಾಸಗಿ ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ. 80 ಕ್ಲಿನಿಕ್‌ಗಳಿಗೆ ನೋಟಿಸ್ ನೀಡಲಾಗಿದೆ. ಇನ್ನು ಮತ್ತೊಂದೆಡೆ 2023ರ ಸಾಲಿನ ಗರ್ಭಪಾತದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಸಾಲಿನಲ್ಲಿ 1800ಕ್ಕೂ ಹೆಚ್ಚು ಗರ್ಭಪಾತ ಪ್ರಕರಣಗಳು ದಾಖಲಾಗಿರುವ ಬಗ್ಗೆ ಟಿವಿ9ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭ್ರೂಣ ಹತ್ಯೆ, ಪತ್ತೆ ಜಾಲ ಭೇದಿಸಲು ಮುಂದಾಗಿದ್ದಾರೆ. ಈಗಾಗಲೇ 15 ಖಾಸಗಿ ಕ್ಲಿನಿಕ್‌ಗಳಿಗೆ ಬೀಗ ಹಾಕಿಸಿದ್ದಾರೆ. ಜಿಲ್ಲಾ ಟಾಸ್ಕ್ ಫೋರ್ಸ್ ತಂಡ ಕ್ಲಿನಿಕ್‌ಗಳು, ನರ್ಸಿಂಗ್ ಹೋಂಗಳು, ಸ್ಕ್ಯಾನಿಂಗ್ ಸೆಂಟರ್​ಗಳಲ್ಲಿ ಪರಿಶೀಲನೆ ನಡೆಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದೆ. ಮೈಸೂರು ಜಿಲ್ಲೆಯಾದ್ಯಂತ ಟಾಸ್ಕ್‌ಫೋರ್ಸ್‌ನಿಂದ ಪರಿಶೀಲನೆ ನಡೆಸಲಾಗುತ್ತಿದೆ. KPMA ಪ್ರಮಾಣಪತ್ರ, ನಿಯಮ ಪಾಲಿಸದ ಕ್ಲಿನಿಕ್​​ಗಳಿಗೆ ನೋಟಿಸ್​ ನೀಡಿದ್ದೇವೆ. ಒಂದು ವಾರದಲ್ಲಿ ಉತ್ತರ ಕೊಡಲು ಸೂಚಿಸಿದ್ದೇವೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ.ಕುಮಾರಸ್ವಾಮಿ ತಿಳಿಸಿದ್ದಾರೆ.

2023ರ ಸಾಲಿನ ಗರ್ಭಪಾತದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಸಾಲಿನಲ್ಲಿ 1800ಕ್ಕೂ ಹೆಚ್ಚು ಗರ್ಭಪಾತ ಪ್ರಕರಣಗಳು ದಾಖಲಾಗಿರುವ ಬಗ್ಗೆ ಟಿವಿ9ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಕಾರಣಗಳಿಂದ ಈ ಗರ್ಭಪಾತಗಳು ಆಗಿವೆ. ಇದರ ಸಂಪೂರ್ಣ ಅಂಕಿ ಅಂಶ ಕಲೆ ಹಾಕಲಾಗುತ್ತಿದೆ. ಗರ್ಭಪಾತದ ನಿಖರ ಕಾರಣ ನೀಡುವಂತೆ ಸೂಚಿಸಲಾಗಿದೆ. ಒಂದು ವೇಳೆ ವೈದ್ಯಕೀಯ ಕಾರಣಕ್ಕೆ ಆಗದಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಸ್ಥಗಿತಗೊಂಡಿರುವ ಸ್ಕ್ಯಾನಿಂಗ್ ಸೆಂಟರ್ ಸೀಲ್ ಮಾಡಲು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚನೆ ನೀಡಿದ್ದಾರೆ. ಹಲವು ಕಾರಣಗಳಿಂದ ಕೆಲಸ ನಿರ್ವಹಿಸದ ಸ್ಕ್ಯಾನಿಂಗ್ ಸೆಂಟರ್‌ಗಳು ದುರುಪಯೋಗ ಆಗುವ ಸಾಧ್ಯತೆ ಇದೆ. ಭ್ರೂಣ ಪತ್ತೆ ಹತ್ಯೆಯಂತಹ ಪ್ರಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂತಹ ಸ್ಕ್ಯಾನಿಂಗ್ ಸೆಂಟರ್ ಸೀಲ್ ಮಾಡಲು ನಿರ್ಧಾರ ಮಾಡಲಾಗಿದೆ.

– ಜಾಹೀರಾತು –

ಭ್ರೂಣ ಪತ್ತೆ ಹತ್ಯೆ ಮಾಡಿಸಿರುವ ಪೋಷಕರಿಗಾಗಿ ಹುಡುಕಾಟ

ಇನ್ನು ಆಶಾ ಕಾರ್ಯಾಕರ್ತರ ಮೂಲಕ ಮನೆ ಮನೆಗೂ ತೆರಳಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಭ್ರೂಣ ಪತ್ತೆ ಹತ್ಯೆ ಮಾಡಿಸಿರುವ ಪೋಷಕರಿಗಾಗಿ ಹುಡುಕಾಟ ನಡೆಯುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಈ ಬಗ್ಗೆ ನಿರಂತರವಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಭ್ರೂಣ ಪತ್ತೆ ಕಾನೂನು ಬಾಹಿರ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಮಾಹಿತಿ ನೀಡಿದರೆ 50 ಸಾವಿರ ಬಹುಮಾನ ನೀಡಲಾಗುತ್ತೆ. ಮಾಹಿತಿ ನೀಡಿದವರ ಗೌಪ್ಯತೆ ಕಾಪಾಡಲಾಗುವುದು. ಅನಧಿಕೃತ ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ವಾರ್ನಿಂಗ್ ಕೊಟ್ಟಿದ್ದೇವೆ. ಒಂದು ವೇಳೆ ಕಾನೂನು ಬಾಹಿರವಾಗಿ ಕ್ಲಿನಿಕ್ ಸ್ಕ್ಯಾನಿಂಗ್ ಸೆಂಟರ್ ನಡೆಸುತ್ತಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ ಎಂದು ಪಿ.ಸಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ

Related posts

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರಿಗೆ ಸನ್ಮಾನ.

ರಾಜ್ಯದ 105  ತಾಲ್ಲೂಕುಗಳು ಬರ ಪೀಡಿತ: ಸರ್ಕಾರದಿಂದ ಅಧಿಕೃತ ಘೋಷಣೆ.

ಗೊಂದಲದ ಗೂಡಾಗಿರುವ ಜಾತಿಗಣತಿ ವರದಿ ಸ್ವೀಕಾರವಾಗುತ್ತಾ…?