ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ.

ಶಿವಮೊಗ್ಗ :ಅಕ್ಟೊಬರ್ 15- 10-  2023 ರಂದು ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬ ದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಯುಗ ಯೋಗಿ ಪದ್ಮಭೂಷಣ ಪುರಸ್ಕೃತ ಪರಮಪೂಜ್ಯ  ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ  ದಿವ್ಯಾಶೀರ್ವಾದಗಳೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ   15/10/2023 ರಿಂದ 24/10/2023 ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗಳಿಂದ ಪೂಜಾ ಕೈಂಕರ್ಯಗಳು ಜರುಗಲಿವೆ.ಸಂಜೆ ದುರ್ಗಾಹೋಮ ನಡೆಸಲಾಗುವುದು, ಪ್ರತಿದಿನ ಸಂಜೆ 6:15 ರಿಂದ 7:20 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.

    ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ  ಅ, 21/10/2023 ರಂದು ಬೆಳಿಗ್ಗೆ 7 ರಿಂದ ಚಂಡಿಕಾ ಹೋಮ, ಮಹಾಮಂಗಳಾರತಿ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ನಂತರ ಪ್ರಸಾದ ವಿನಿಯೋಗ ವಿರುತ್ತದೆ. ಅ,24/10/2023 ರ ಸಂಜೆ 5 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮವಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ. ಶ್ರೀ ಕಾಳಿಕಾಂಬ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶಿಮೊಗ್ಗ ಶಾಖಾಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts

ಚಂದ್ರಯಾನ-3 ಯಶಸ್ವಿ: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ.

ಕ್ರೀಡೆಯಿಂದ ದೈಹಿಕ ಮಾನಸಿಕ ಆರೋಗ್ಯ ವೃದ್ಧಿ-ಸರ್ಜಿ ಫೌಂಡೇಶನ್ ನ ಡಾ. ಧನಂಜಯ್ ಸರ್ಜಿ

ಮಕ್ಕಳಿಗೆ ಶ್ರೇಷ್ಠ ಸಂಸ್ಕೃತಿ ಪರಂಪರೆಯ ಪರಿಚಯ ಅಗತ್ಯ-ಜಿ ವಿಜಯಕುಮಾರ್