ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿ.ಎಸ್.ವೈ ಮನೆಗೆ ಭೇಟಿ ನೀಡಿ ಉಪಹಾರ ಸವಿದ ನಿಖಿಲ್ ಕುಮಾರಸ್ವಾಮಿ…

ಬೆಂಗಳೂರು :   ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.  ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನ ಜೆಡಿಎಸ್ ಸೇರಿಕೊಂಡಿದೆ. 2024ರ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಮೈತ್ರಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ನಿಖಿಲ್ ಕುಮಾರಸ್ವಾಮಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಜೊತೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಳಿಕ ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಯಡಿಯೂರಪ್ಪ ಭೇಟಿ ಮಾಡಿದರು. ಶಾಲು ಹೊದಿಸಿ ಅವರನ್ನು ಸನ್ಮಾನಿಸಿದರು, ಕೃಷ್ಣನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದರು.      ನಂತರ ಬಿಎಸ್ ವೈ ನಿವಾಸದಲ್ಲಿ ಉಪಹಾರ ಸೇವಿಸಿದರು.

ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭೇಟಿ ಕುರಿತಂತೆ ಮಾತನಾಡಿ ನಿಖಿಲ್ ಕುಮಾರಸ್ವಾಮಿ ಅವರ ಭೇಟಿ ಸೌಹಾರ್ದಯುತವಾಗಿತ್ತು ಎಂದು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದರು ಈ ವೇಳೆ ಯಡಿಯೂರಪ್ಪನವರಿಗೆ ಸನ್ಮಾನಿಸಿ ಆಶೀರ್ವಾದ ಪಡೆದುಕೊಂಡಿದ್ದರು ಅವರ ಜೊತೆಗೆ ಶಾಸಕ ಮುನಿರತ್ನ ಅವರು ಕೂಡ ಜೊತೆಗಿದ್ದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಖಿಲ್ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ನಿಖಿಲ್ ಕುಮಾರಸ್ವಾಮಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದಾರೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕರೆ ಮಾಡಿ ಮನೆಗೆ ಬನ್ನಿ ಅಂತ ಆಹ್ವಾನಿಸಿದ್ದಾರೆ. ಸದ್ಯದಲ್ಲೇ ಅವರ ಮನೆಗೂ ಭೇಟಿ ನೀಡುತ್ತೇನೆ.ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ಹೊಂದಾಣಿಕೆ ಆಗಿದೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ ಎಂದು ಅವರು ತಿಳಿಸಿದರು.

ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್ ವಿಚಾರವಾಗಿ ಮಾತನಾಡಿದ ಅವರು ಎಲ್ಲ ಸಂಘಟನೆಗಳು ಸೇರಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದಾರೆ ಅಂದಿಗೆ ನಮ್ಮ ವಿರೋಧವಿಲ್ಲ. ನಾವು ಸಂಪೂರ್ಣವಾಗಿ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

 

Related posts

ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ.

ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಚಾಂಪಿಯನ್ 

15 ದಿನದೊಳಗೆ  ಎಲ್ಲಾ ಮಹಿಳೆಯರ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಬರಲಿದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.