ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಿಜೆಪಿಯ ಯಾವುದೇ ಮುಖಂಡರು ಕಾಂಗ್ರೆಸ್‍ಗೆ ಹೋಗುವುದಿಲ್ಲ- ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ: ಬಿಜೆಪಿಯ ಯಾವುದೇ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರು ಯಾವುದೇ ಕಾರಣಕ್ಕೂ ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಖಾಲಿ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಜನ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ. ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದ ಗೊತ್ತಾಗಲಿದೆ ಇದೇ ಸಿದ್ದರಾಮಯ್ಯ ಸೂರ್ಯ ಚಂದ್ರರಿರುವ ವರೆಗೆ ಕಾಂಗ್ರೆಸ್ ಬಿಟ್ಟ 17 ಶಾಸಕರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದರು. ಈಗ ಅವರನ್ನು ಸೆಳೆಯಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲಿಸುವುದಿಲ್ಲ ಎಂದರು.
ಪ್ರಧಾನಿ ಮೋದಿಯವರ ಇಂದಿನ ಬೆಂಗಳೂರು ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಶ್ವದಲ್ಲೆ ಅತ್ಯಂತ ದೊಡ್ಡ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳನ್ನು ಮೋದಿಯವರು ಬೆಂಗಳೂರಿಗೆ ಬಂದು ಅಭಿನಂದಿಸಿ, ಅವರ ಬಗ್ಗೆ ಮೆಚ್ಚಗೆ ವ್ಯಕ್ತಪಡಿಸಿದ್ದಾರೆ. ಭಾರತೀಯ ಸಂಸ್ಕøತಿ, ಸಂಸ್ಕಾರ ಜೊತೆಗೆ ಇಲ್ಲಿನ ವೈಜ್ಞಾನಿಕ ಸಾಧನೆಯನ್ನು ಇಡೀ ವಿಶ್ವವೇ ಮೆಚ್ಚಿದೆ. ಮೊಸರಲ್ಲಿ ಕಲ್ಲುಹುಡುಕುವ ರಾಜಕಾರಣವನ್ನು ಕೆಲವರು ಮಾಡುತ್ತಿದ್ದಾರೆ. ಈ ಸಾಧನೆ ಬಿಜೆಪಿಯ ಸಾಧನೆ ಅಲ್ಲ. ಇದು ರಾಷ್ಟ್ರದ ಸಾಧನೆ.ವಿಜ್ಞಾನಿಗಳಿಗೆ ಅಭಿನಂದಿಸಿ ಸಿಹಿ ಹಂಚಿದರೆ ಸಿಹಿಗೆ ಯಾಕೆ ದುಡ್ಡುಖರ್ಚುಮಾಡಿದಿರಿ ಎಂದು ಕೇಳುವ ಮುಟ್ಠಾಳರು ಕೆಲವರಿದ್ದಾರೆ. 1700 ಕೋಟಿಖರ್ಚು ಮಾಡಿದ ರಷ್ಯಾ ಯಶಸ್ಸು ಕಾಣಲಿಲ್ಲ. 650 ಕೋಟಿ ಖರ್ಚು ಮಾಡಿದ ನಾವು ಚಂದ್ರಯಾನದಲ್ಲಿ ಯಶಸ್ಸು ಕಂಡಿದ್ದೇವೆ ಎಂದರು.

Related posts

ಎಲೆ ಮರೆಯ ಕಾಯಿಯಂತಹ ಸಾಧಕರನ್ನು ಗುರುತಿಸುವ ಕೆಲಸ ಪರಿಷತ್ತು ಮಾಡುತ್ತಿದೆ-ನಾಡೋಜ ಡಾ.ಮಹೇಶ ಜೋಶಿ

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆ ವಾಪಸ್: ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್.

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿ