ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಯಾವುದೇ ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗಲ್ಲ –ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ

ಬೆಂಗಳೂರು:  ಜೆಡಿಎಸ್​ನ ಯಾವುದೇ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ. JDS ಶಾಸಕರು ಪಕ್ಷ ಬಿಡುತ್ತಾರೆನ್ನುವುದು ಊಹಾಪೋಹ ಅಷ್ಟೇ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್​.ಡಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ತಿಂಗಳು 10ನೇ ತಾರೀಖು ಒಂದು ಸಭೆ ಮಾಡುತ್ತೇನೆ. ಸಭೆಗೆ ಎಲ್ಲಾ ಜಿಲ್ಲೆಗಳಿಂದ ಜೆಡಿಎಸ್​ ಕಾರ್ಯಕರ್ತರು ಬರುತ್ತಾರೆ. 91ನೇ ವಯಸ್ಸಿನ ನನ್ನನ್ನು ಯಾರೂ ಕೈಬಿಡಬೇಡಿ ಎಂದು ಹೆಚ್​.ಡಿ.ದೇವೇಗೌಡ ಮನವಿ ಮಾಡಿದರು.

ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ. ಹೀಗಾಗಿ ನಾನೂ ಕೂಡ  ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳುವೆ ಎಂದು JDS ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.

ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ಕೆಲಸ ಮಾಡುತ್ತಿದ್ದೇವೆ ಎಂದರು.

ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ. ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್  ಕೋರ್ ಕಮಿಟಿ ಸದಸ್ಯರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

Related posts

ವಾರಕ್ಕೆ 55 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ಪ್ರತಿವರ್ಷ 8 ಲಕ್ಷ ಜನರು ಸಾಯುತ್ತಿದ್ದಾರಂತೆ..

ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ: ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ.

ಪ್ರತಿಯೊಂದು ಭಾಷೆಯು ಅರಿವಿನ ಭಾಷೆಯೇ-ಸಾಹಿತಿ ಡಾ.ಹೆಚ್.ಟಿ.ಕೃಷ್ಣಮೂರ್ತಿ