ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಸೀಟು ಹೊಂದಾಣಿಕೆ ಬಗ್ಗೆ ಭಿನ್ನಾಭಿಪ್ರಾಯವಿಲ್ಲ- ಮಾಜಿ ಸಿಎಂ ಹೆಚ್.ಡಿಕೆ.

ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತ: ಸೀಟು ಹೊಂದಾಣಿಕೆ ಬಗ್ಗೆ ಭಿನ್ನಾಭಿಪ್ರಾಯವಿಲ್ಲ- ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು: -ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರಿನ  ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ,  ಮೈತ್ರಿ ಬಗ್ಗೆ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಲಾಂಗ್ ರಿಲೇಷನ್ ಶಿಪ್ ಮುಂದುವರೆಸುವ ಬಗ್ಗೆ ಚರ್ಚೆಗಳು ನಡೆದಿವೆ. ನಾಡಿನ ಜನತೆ ಹಿತರಕ್ಷಣೆ ದೃಷ್ಟಿಯಿಂದ ಕೆಲ ವಿಷಯಗಳು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ದಸರಾ ಹಬ್ಬದ ನಂತರ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಮಾತನಾಡಲಿದ್ದಾರೆ ಎಂದರು.

ಇನ್ನು ಕಾವೇರಿ ಹೋರಾಟಕ್ಕೆ ಬೆಂಬಲ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ,  ನಾನು ಈಗ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಜೆಡಿಎಸ್ ಬೆಂಬಲ ಕೊಟ್ಟಿದ್ದೇವೆ. ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದರು.

Related posts

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ-ವಾಗ್ಮಿ ರಾಯಚೂರು ಕೃಷ್ಣಾಚಾರ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ 

ಸೇವಾ ಕಾರ್ಯದಲ್ಲಿ ಕೈಜೋಡಿಸಲು ದೇಣಿಗೆ ಸಹಕಾರ ಮುಖ್ಯ-ಕೆ.ರವಿ ಕೋಟೋಜಿ