ಕನ್ನಡಿಗರ ಪ್ರಜಾನುಡಿ
ಆರೋಗ್ಯಜಿಲ್ಲೆಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳು

ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಸೋಂಕು ದೃಢ: ಓರ್ವ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಶುಕ್ರವಾರ 78 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ರಾಜ್ಯದಲ್ಲಿ ಸೋಂಕು ದೃಢಪಟ್ಟವರ ಪೈಕಿ ರಾಜಧಾನಿ ಬೆಂಗಳೂರಿನಲ್ಲಿಯೇ 68 ಜನ ಇದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. ಈ ಪೈಕಿ 162 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದರೆ, ಇನ್ನು 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದ 13 ಮಂದಿ ಪೈಕಿ 8 ಮಂದಿ ಐಸಿಯುನಲ್ಲಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ 7 ಮಂದಿ ಡಿಸ್ಜಾರ್ಜ್​ ಆಗಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡಾ 3.29ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿಯೇ ಶುಕ್ರವಾರ 68 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ 156 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು​ ಹೆಚ್ಚಾಗುತ್ತಿರುವ ಹಿನ್ನಲೆ, ರಾಜ್ಯ ಸರ್ಕಾರ ಕೋವಿಡ್​ ನಿರ್ವಹಣೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪ ಸಮಿತಿ ರಚಿಸಿದೆ.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ.ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ.

Related posts

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಕರುನಾಡು ಸಂರಕ್ಷಣಾ ವೇದಿಕೆ ಪ್ರತಿಭಟನೆ.

ಜಗತ್ತಿನ ಎಲ್ಲಾ ಧರ್ಮಗಳೂ ಶಾಂತಿಯನ್ನೇ ಬೋಸುತ್ತವೆ-ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಮೆಡಿಕಲ್ ಕಾಲೇಜು ಸ್ಥಳಾಂತರ ಹಿನ್ನೆಲೆ: ರಾಮನಗರ ಬಂದ್ : ರೈತರು, ವ್ಯಾಪಾರಸ್ಥರಿಂದ ಬೆಂಬಲ.