ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ- ಹೆಚ್.ಎಸ್. ಸುಂದರೇಶ್

ಶಿವಮೊಗ್ಗ: ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾಯಕರಾದ ರಾಹುಲ್ ಗಾಂಧಿ, ಮುಖ್ಯಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಯವರು ಕಂಪ್ಯೂಟರ್‍ನ ಒಂದು ಬಟನ್ ಒತ್ತುವ ಮೂಲಕ ಇದಕ್ಕೆ ಚಾಲನೆ ನೀಡಲಿದ್ದಾರೆ. ಒಂದೇ ಕ್ಷಣದಲ್ಲಿ ರಾಜ್ಯದ 1.10 ಕೋಟಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ. ಕರ್ನಾಟಕದ ಜನರು ಇದನ್ನು ಸ್ವಾಗತಿಸುತ್ತಿದ್ದಾರೆ. ಬಡವರ ಪರವಾದ ಈ ಯೋಜನೆಗಳನ್ನು ಕೆಲವರು ರಾಜಕಾರಣಕ್ಕಾಗಿ ಟೀಕಿಸುತ್ತಿದ್ದಾರೆ ಆದರೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಎಲ್ಲಾ ಯೋಜನೆಗಳು ಬಡವರನ್ನು ತಲುಪುತ್ತವೆ ಎಂದರು.
ಗ್ಯಾರಂಟಿ ಅಲ್ಲದ ಯೋಜೆನಗಳ ಜೊತೆಗೆ ಇನ್ನೂ ಹಲವು ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಆಯೋಜಿಸಿದೆ. ಶಾಲಾ ಮಕ್ಕಳಿಗೆ ಮೊಟ್ಟ ನಿಲ್ಲಿಸಲಾಗಿತ್ತು. ಈಗ ಮೊಟ್ಟಯ ಜೊತೆಗೆ ಬಾಳೆಹಣ್ನು, ಶೇಂಗಾ ಮಿಠಾಯಿ ಕೂಡ ನೀಡಲಾಗುತ್ತಿದೆ. ಇಂದಿರಾ ಕ್ಯಾಂಟೀನ್‍ಗಳನ್ನು ಬಲವರ್ಧನೆಗೊಳಿಸಲಾಗುತ್ತಿದೆ ಆರೋಗ್ಯ ಸಚಿವರು ಈಗಾಗಲೇ ಪ್ರಕಟಿಸಿರುವಂತೆ ಮನೆಮನೆಗೆ ಕ್ಲಿನಿಕ್ ಬರಲಿದೆ. ಆ ಮೂಲಕ ವೈದ್ಯರು ಮನೆಗಳಿಗೆ ತಲುಪಿ ಅವರ ಆರೋಗ್ಯ ವಿಚಾರಿಸಿಕೊಂಡು ಉಚಿತವಾಗಿ ಔಷಧಿಯನ್ನು ಕೂಡ ನೀಡುತ್ತಾರೆ. ಶಿಕ್ಷಣಕ್ಕೆ ಒತ್ತುಕೊಡಲಾಗಿದೆ. ಕೈಗಾರಿಕೆಗಳಿಗೆ ಉತ್ತೇಜನ ನೀಡಲಾಗಿದೆ. ಹೀಗೆ ಎಲ್ಲಾ ರೀತಿಯ ಕಲ್ಯಾಣ ಕಾರ್ಯಕ್ರಮವನ್ನು ಸರ್ಕಾರ ಹಾಕಿಕೊಂಡಿದೆ ಎಂದರು.
ಕಾಂಗ್ರೆಸ್ ಬಿಟ್ಟುಹೋದವರು ಮತ್ತೆ ಸೇರ್ಪಡೆಗೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮತ್ತಷ್ಟು ಬಲಗೊಳ್ಳುವ ಸೂಚನೆ ಇದು.ಇವರನ್ನು ಸೇರಿಸಿಕೊಳ್ಳುವ ಬಗ್ಗೆ ಕೆಲವು ಭಿನ್ನಾಭಿಪ್ರಾಯ ಇತ್ತು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ನಮ್ಮ ನಾಯಕರು ಬಗೆಹರಿಸುತ್ತಾರೆ. ಆ ಮೂಲಕ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪಾರ್ಲಿಮೆಂಟ್ ಚುನಾವಣೆಗೆ ಪಕ್ಷ ಸಿದ್ಧವಾಗುತ್ತಿದೆ ಎಂದ ಅವರು, ಯಾವ ಶರತ್ತುಗಳು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ಚಂದ್ರಶೇಖರ್, ಚಂದನ್, ಮಾರ್ಟಿಸ್, ಮುಜೀಬ್, ಶಿ.ಜು. ಪಾಶಾ, ಎನ್.ಡಿ. ಪ್ರವೀಣ್ ಸೇರಿದಂತೆ ಹಲವರಿದ್ದರು.

Related posts

ಹಂತ ಹಂತವಾಗಿ ಪಶು ಸಂಗೋಪನೆ, ಪಶು ವೈದ್ಯಕೀಯ ಇಲಾಖೆಯಲ್ಲಿ 10,000 ಹುದ್ದೆ ಭರ್ತಿ:

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡರ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ- ಮುಖ್ಯಮಂತ್ರಿ ಸಿದ್ದರಾಮಯ್ಯ