ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಶಕ್ತಿ ಯೋಜನೆ ಯಶಸ್ವಿ ಬೆನ್ನಲ್ಲೆ ಸಾರಿಗೆ ನೌಕರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿ ಸರ್ಕಾರಿ ಬಸ್ ಗಳಲ್ಲಿ ಮಹಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿ ಯಶಸ್ವಿಯಾದ ಬೆನ್ನಲ್ಲೆ ಇದೀಗ ಸಾರಿಗೆ  ನೌಕರರಿಗೆ ಗುಡ್ ನ್ಯೂಸ್ ನೀಡಿದೆ

ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ಯ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ. ಗಳಿಗೆ ಏರಿಕೆ  ಮಾಡಿದೆ.

ಕೆಎಸ್ಆರ್ಟಿಸಿಯಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ರೂ 1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸುತ್ತಿದ್ದು, ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ರೂ.1 ಕೋಟಿ ನೀಡಲಾಗಿದೆ. ಮುಂದುವರೆದು, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ.

ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ರೂ.3.00 ಲಕ್ಷ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದಲೂ ಸಹ ಬೇಡಿಕೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು ರೂ.3.00 ಲಕ್ಷದಿಂದ ರೂ.10.00 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ ರೂ 7.00 ಲಕ್ಷಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸದರಿ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ರೂ. 100 ಗಳಿಂದ ರೂ. 200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು 100 ರೂ.ಗಳಿಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಪರಿಷ್ಕೃತ ಆದೇಶವು ದಿನಾಂಕ: 01.11.2023 ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.

 

Related posts

ರಾಗಿಗುಡ್ಡ ಗಲಾಟೆ ಪ್ರಕರಣ: 24 ಜನರ ವಿರುದ್ದ ಎಫ್ ಐಆರ್: ವಿಡಿಯೋ, ಫೋಟೋ ಆಧರಿಸಿ ಆರೋಪಿಗಳ ಬಂಧನ.

ರಾಜ್ಯದಲ್ಲಿ 3ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲು ಕ್ರಮ-ಸಚಿವ ಮಧು ಬಂಗಾರಪ್ಪ

7ನೇ ವೇತನ ಆಯೋಗ: ವಾರಕ್ಕೆ 5 ದಿನದ ಕೆಲಸ ಸೇರಿ ಹಲವು ಬೇಡಿಕೆಗಳನ್ನ ಮುಂದಿಟ್ಟ ಸಚಿವಾಲಯದ ಸಿಬ್ಬಂದಿ.