ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪ್ರಯಾಣಿಕರೇ ಎಚ್ಚರ: ಇನ್ಮುಂದೆ ರೈಲಿನಲ್ಲಿ ಈ ವಸ್ತುಗಳನ್ನ ತೆಗೆದುಕೊಂಡು ಹೋದ್ರೆ ಜೈಲೂಟ ಫಿಕ್ಸ್.

ಬೆಂಗಳೂರು: ದೇಶಾದ್ಯಂತ ಇತ್ತೀಚಿನ ದಿನಗಳಲ್ಲಿ  ರೈಲುಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದ್ದು, ರೈಲಿನಲ್ಲಿ ಪ್ರಯಾಣಿಕರು ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ಹಲವು ಘಟನೆಗಳು ನಡೆದಿವೆ.  ಇದಕ್ಕೆ ಬ್ರೇಕ್ ಹಾಕಲು ರೈಲ್ವೆ ಇಲಾಖೆ ಮುಂದಾಗಿದೆ.

ಕೆಲ ವಸ್ತುಗಳನ್ನ ರೈಲಿನಲ್ಲಿ ಸಾಗಿಸದಂತೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಎಚ್ಚರಿಕೆ ನೀಡಿದ್ದು ನಿಯಮ ಉಲ್ಲಂಘಿಸಿದರೇ ಜೈಲು ಸೇರೋದು ಖಚಿತವಾಗಿದೆ.  ಹೌದು ಬೆಂಕಿ ಹೊತ್ತಿಸುವ ವಸ್ತುಗಳನ್ನು ರೈಲಿನಲ್ಲಿ  ಸಾಗಿಸದಂತೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸೂಚನೆ ನೀಡಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್, ಸೀಮೆಎಣ್ಣೆ, ಸ್ಟವ್, ಮ್ಯಾಚ್ ಬಾಕ್ಸ್, ಸಿಗರೇಟ್ ಲೈಟರ್, ಪಟಾಕಿ ಸೇರಿದಂತೆ ಯಾವುದೇ ಸ್ಫೋಟಕ ವಸ್ತುಗಳನ್ನು ಪ್ರಯಾಣಿಕರು ತೆಗೆದುಕೊಂಡು ಹೋಗದಂತೆ ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಶುಕ್ರವಾರ ಪ್ರಯಾಣಿಕರಿಗೆ ಸೂಚಿಸಿದ್ದಾರೆ.

ರೈಲಿನಲ್ಲಿ ಪಟಾಕಿ ಮತ್ತು ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸುವುದು ರೈಲ್ವೆ ಕಾಯ್ದೆಯಡಿ ಅಪರಾಧ ಎಂದು ಸೂಚಿಸಿದರು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಲ್ಲದೇ ಚಲಿಸುವ ರೈಲುಗಳಲ್ಲಿ ಮತ್ತು ರೈಲ್ವೆ ಆವರಣದಲ್ಲಿ ಪ್ರಯಾಣಿಕರು ಧೂಮಪಾನ ಮಾಡಬಾರದು ಎಂದು ರೈಲ್ವೆ ಇಲಾಖೆ ಈಗಾಗಲೆ ಸುತ್ತೋಲೆ ಹೊರಡಿಸಿದೆ. ಅಲ್ಲದೇ ಏಪ್ರಿಲ್ ನಿಂದ ಅಕ್ಟೋಬರ್ವರೆಗೆ ಪಟಾಕಿ ಮತ್ತು ಸುಡುವ ವಸ್ತುಗಳನ್ನು ಸಾಗಿಸಿದ್ದಕ್ಕಾಗಿ ಐದು ಪ್ರಕರಣಗಳನ್ನು ದಾಖಲಿಸಲಾಗಿವೆ. ಚಲಿಸುವ ರೈಲಿನಲ್ಲಿ ಮತ್ತು ರೈಲ್ವೆ ಆವರಣಗಳಲ್ಲಿ ಧೂಮಪಾನ ಮಾಡಿದಕ್ಕೆ 258 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ತಿಳಿಸಿದರು.

ಈಗಾಗಲೇ ಅಗ್ನಿ ದುರಂತಗಳಿಂದ ಮುನ್ನೇಚ್ಚರಿಕೆ ಕ್ರಮವನ್ನ ಈ ನಿಯಮವನ್ನ ರೈಲ್ವೆ ಇಲಾಖೆ ತೆಗೆದುಕೊಂಡಿದ್ದು, ರೈಲ್ವೆ ಕಾರ್ಯಾಚರಣೆಗೆ ಸಂಬಂಧಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರಿಗೆ ಅಗ್ನಿಶಾಮಕಗಳನ್ನು ಹೇಗೆ ಬಳಸಬೇಕೆಂದು ತರಬೇತಿ ನೀಡಲಾಗಿದೆ. ವಿಭಾಗದ 30 ನಿಲ್ದಾಣಗಳಲ್ಲಿ ರೈಲ್ವೆ ಮೇಲ್ವಿಚಾರಕರು ಮತ್ತು ಸಿಬ್ಬಂದಿ ಅಗ್ನಿ ಸುರಕ್ಷತಾ ತಪಾಸಣೆ ನಡೆಸಿದರು. 182 ಪ್ಯಾಂಟ್ರಿ ಕಾರುಗಳನ್ನು ಸಹ ಪರಿಶೀಲಿಸಲಾಗಿದೆ ಮತ್ತು ನ್ಯೂನತೆಗಳನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ರೈಲ್ವೆಯಲ್ಲಿ ದಹನಕಾರಿ ಮತ್ತು ಸ್ಫೋಟಕ ವಸ್ತುಗಳನ್ನು ಸಾಗಿಸುವುದು ಶಿಕ್ಷಾರ್ಹ ಅಪರಾಧವಾಗಿದೆ.

 

Related posts

ಜಿಲ್ಲೆಯ ಎಲ್ಲಾ ಗ್ರಾ.ಪಂ ಪಿಡಿಒಗಳು ತಮ್ಮ ಕಾರ್ಯನಿರ್ವಹಣೆ ಸ್ಥಳದಲ್ಲಿಯೇ ವಾಸಿಸಬೇಕು-ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಆಗ್ರಹ

ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ನೀರು

ತುಳಜಾಭವಾನಿ ದೇವಸ್ಥಾನದಲ್ಲಿ 84 ನೇ ವರ್ಷದ ಶ್ರೀ ಗಣೇಶೋತ್ಸವ.