ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭಾರತದ ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್ ನಿಧನ

ಚೆನ್ನೈ : ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದು ಎಂಎಸ್ ಸ್ವಾಮಿನಾಥನ್ ಇಂದು ನಿಧನರಾಗಿದ್ದಾರೆ

ಚೆನ್ನೈನಲ್ಲಿ  ಎಂಎಸ್ ಸ್ವಾಮಿನಾಥನ್ ನಿಧನರಾಗಿದ್ದು ಅವರಿಗೆ 98 ವರ್ಷ ವಯಸ್ಸಾಗಿತ್ತು.. ಸ್ವಾಮಿನಾಥನ್ ಅವರು ಎಂಎಸ್ ಸ್ವಾಮಿನಾಥನ್ ರಿಸರ್ಚ್ ಫೌಂಡೇಶನ್ (ಎಂಎಸ್‌ಎಸ್‌ಆರ್‌ಎಫ್) ಸ್ಥಾಪಕರಾಗಿದ್ದರು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11:15 ಕ್ಕೆ ತೆಯ್ನಾಂಪೇಟೆಯ ತಮ್ಮ ನಿವಾಸದಲ್ಲಿ ನಿಧನರಾದರು. ಸ್ವಾಮಿನಾಥನ್, ಭಾರತ ದೇಶದ ಹಸಿರು ಕ್ರಾಂತಿಯ ಹರಿಕಾರರೆಂದು ಪ್ರಸಿದ್ಧರಾಗಿದ್ದಾರೆ. ಅವರು ಆಗಸ್ಟ್ ೭, ೧೯೨೫ ರಂದು ಜನಿಸಿದ್ದರು. ಸ್ವಾಮಿನಾಥನ್ ಅವರ ತಂದೆ ವೈದ್ಯರಾಗಿದ್ದು ಮಹಾತ್ಮ ಗಾಂಧೀಜಿಯವರ ಅನುಯಾಯಿಗಳಾಗಿದ್ದರು. ತಮ್ಮ ಪ್ರಾರಂಭಿಕ ಶಿಕ್ಷಣದ ನಂತರದಲ್ಲಿ ಸ್ವಾಮಿನಾಥನ್ ಅವರು ಕೃಷಿ ಪದವಿಗಾಗಿ ಓದಿದರು.

 

Related posts

ಅತ್ಯಾಚಾರ ಬೆದರಿಕೆ ಆರೋಪ: ನಟ ನಿರ್ಮಾಪಕ ವೀರೇಂದ್ರ ಬಾಬು ಅರೆಸ್ಟ್.

ಸಾರ್ವಜನಿಕರು- ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಕಾರ್ಯಕ್ರಮ

ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ.