ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಅಕ್ಷೇಪಾರ್ಹ ಪದ ಬಳಕೆ ಪ್ರಕರಣ: ನಟ ಉಪೇಂದ್ರಗೆ ಪೊಲೀಸರಿಂದ ನೋಟಿಸ್

ಬೆಂಗಳೂರು: ಅಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ನಟ ಉಪೇಂದ್ರಗೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ನೋಟಿಸ್ ನೀಡಿದ್ದಾರೆ.

ಇತ್ತೀಚೆಗೆ ಲೈವ್​ನಲ್ಲಿ ಮಾತನಾಡಿದ್ದ ನಟ ಉಪೇಂದ್ರ ಅವರು ಹೊಲಗೇರಿ ಎಂಬ ಶಬ್ದ ಬಳಕೆ ಮಾಡಿದ್ದರು. ಈ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ತಪ್ಪಿನ ಅರಿವಾದ ಬಳಿಕ ಉಪೇಂದ್ರ ಕ್ಷಮೆ ಕೇಳಿದ್ದರು.

ಇದಾದ ಬಳಿ ನಟ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರಿಂದ ನಟ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ.

ನಟ ಉಪೇಂದ್ರ ಅವರ ಕತ್ರಿಗುಪ್ಪೆ ಮತ್ತು ಸದಾಶಿವನಗರ ಮನೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣ ಸಂಬಂಧ ಸ್ಥಳ‌ ಮಹಜರು ನಡೆಯಲಿದೆ ಎಂದು ಹೇಳಲಾಗುತ್ತಿದೆ.

Related posts

ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ತಮ್ಮ ಸಿದ್ಧಾಂತಕ್ಕೆ ಪೂರಕವಾಗಿರಲಿ ಎಂಬ ಆರಗ ಜ್ಞಾನೇಂದ್ರ ಪ್ರತಿಪಾದನೆ ಅತ್ಯಂತ ದೌರ್ಭಾಗ್ಯ-ಪಡುವಳ್ಳಿ ಹರ್ಷೇಂದ್ರಕುಮಾರ್

ಇನ್ಮುಂದೆ ಯಾವುದೇಪೋಸ್ಟಿಂಗ್ ಮತ್ತು ವರ್ಗಾವಣೆಗೆ ಸಿಎಂ ಪೂರ್ವಾನುಮತಿ ಕಡ್ಡಾಯ.

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿ: ಟಿಕೆಟ್ ಸಿಗುವ ಭರವಸೆ ಇದೆ- ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ. ರಮೇಶ್ ಶೆಟ್ಟಿ