ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಿವಿಲ್ ವ್ಯಾಜ್ಯಗಳ ಸೆಟಲ್ ಮೆಂಟ್ ಕೇಂದ್ರಗಳಾಗುತ್ತಿರುವ ಪೊಲೀಸ್ ಠಾಣೆಗಳು: ಹೈಕೋರ್ಟ್ ಬೇಸರ.

ಬೆಂಗಳೂರು: ಪೊಲೀಸ್ ಠಾಣೆಗಳು ಸಿವಿಲ್ ವ್ಯಾಜ್ಯಗಳ ಸೆಟಲ್ ಮೆಂಟ್ ಕೇಂದ್ರಗಳಾಗುತ್ತಿವೆ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

ಪೊಲೀಸ್ ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳನ್ನು ಸೆಟಲ್ಮೆಂಟ್ ಮಾಡುವ ಪೊಲೀಸರ ಧೋರಣೆಗೆ ಹೈಕೋಟ್ ಗರಂ ಆಗಿದೆ. ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಖಾಸಗಿ ವ್ಯಕ್ತಿಗಳು ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಬಾಣಸವಾಡಿ ಠಾಣಾ ಪೊಲೀಸರು ನೆರವು ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಗೆದ್ದಲಹಳ್ಳಿ ನಿವಾಸಿ ಜುವಿತ್ತಾ ರವಿ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರಿಗೆ ಪೊಲೀಸರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಠಾಣೆಗಳು ರಿಯಲ್ ಎಸ್ಟೇಟ್ ವ್ಯವಹಾರಸ್ಥರ ಸೆಟೆಲ್ ಮೆಂಟ್ ಮಾಡುವ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಸಿವಿಲ್ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಪದೇ ಪದೇ ಆದೇಶಿಸಿದ್ದರೂ, ಪೊಲೀಸರು ಮಾತ್ರ ಅದನ್ನು ಉಲ್ಲಂಘಿಸುತ್ತಲೇ ಇದ್ದಾರೆ ಎಂದು  ಬೇಸರ ಹೊರಹಾಕಿತು.

ಅಲ್ಲದೆ, ಪ್ರಕರಣ ಕುರಿತಂತೆ ಬಾಣಸವಾಡಿ ಸಹಾಯಕ ಪೊಲೀಸ್ ಆಯುಕ್ತರು ನ.29ರಂದು ಮಧ್ಯಾಹ್ನ 2.30ಕ್ಕೆ ಕೋರ್ಟ್ಗೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಕೆಲ ಖಾಸಗಿ ವ್ಯಕ್ತಿಗಳು ನನ್ನಿಂದ 12 ಲಕ್ಷ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸರು 2023ರ ನ.21ರಂದು ಠಾಣೆಗೆ ಕರೆದೊಯ್ದು ಹಣ ಪಾವತಿಸಲು ಸೂಚಿಸುತ್ತಿದ್ದರು. ನ.25ರಂದು ಚೆಕ್ ಸಮೇತ ಠಾಣೆಗೆ ಹಾಜರಾಗಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು, ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

 

Related posts

ಕಟೀಲ್ : ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖಿ ಕೆಲಸ: ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ…..

ನಾಳಿನ ಸರ್ವಪಕ್ಷ ಸಭೆ:  ಮಾಜಿ ಸಿಎಂಗಳಿಗೆ ಆಹ್ವಾನ ನೀಡಿದ ಸಿಎಂ ಸಿದ್ಧರಾಮಯ್ಯ 

ಭದ್ರಾವತಿಯ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನ.5 ರಂದು ಸಿಎಂಗೆ ಮನವಿ- ಜೆಡಿಯು ಮುಖಂಡ ಶಶಿಕುಮಾರ್ ಗೌಡ