ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪ್ಲಾಸ್ಟಿಕ್ ಅತಿಯಾಗಿ ಬಳಸುವುದರಿಂದ ಪರಿಸರಕ್ಕೆ ಹಾನಿ-ಪೂರ್ಣಿಮಾ ಸುನೀಲ್ 

ಶಿವಮೊಗ್ಗ: ಪ್ಲಾಸ್ಟಿಕ್ ಅತಿಯಾಗಿ ಬಳಸುವುದರಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಸದೇ ಇರುವ ಸಂಕಲ್ಪ ಮಾಡಬೇಕು. ಪ್ಲಾಸ್ಟಿಕ್ ಬದಲಾಗಿ ಪೇಪರ್ ಅಥವಾ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಬಸವೇಶ್ವರ ದೇವಸ್ಥಾನದ ಹತ್ತಿರ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಟ್ರಾಫಿಕ್ ಫಲಕ ಅನಾವರಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾರ್ವಜನಿಕರು ಮಾರುಕಟ್ಟೆ ಅಥವಾ ಯಾವುದೇ ವಸ್ತುಗಳನ್ನು ಖರೀದಿಸಲು ಬರುವಾಗ ಬಟ್ಟೆ ಬ್ಯಾಗ್‌ಗಳನ್ನು ತರಬೇಕು. ಇದರಿಂದ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗುತ್ತದೆ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದು ತಿಳಿಸಿದರು.

ಸುರಕ್ಷತೆ ದೃಷ್ಠಿಯಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. ಮಕ್ಕಳಿಗೆ ವಾಹನ ಚಲಾಯಿಸಲು ಕೊಡಬಾರದು. ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸದೇ ಸಂಚಾರ ನಿಯಮ ಫಲಕ ಇರುವ ಅನುಸಾರ ನಿಲ್ಲಿಸಬೇಕು. ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಅಪಘಾತ ಪ್ರಮಾಣ ಕಡಿಮೆ ಆಗುತ್ತದೆ ಎಂದರು.

ಪಾಲಿಕೆ ಮಾಜಿ ಸದಸ್ಯ ರಾಮು ಮಾತನಾಡಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಎಲ್ಲರೂ ನಿಲ್ಲಿಸಬೇಕು. ಪರಿಸರ ಸಂರಕ್ಷಣೆಗೆ ಪೂರಕವಾದ ಚಟುವಟಿಕೆಗಳನ್ನು ಎಲ್ಲರೂ ಮಾಡಬೇಕು. ಸಂಘ ಸಂಸ್ಥೆಗಳ ಸಹಕಾರವು ಮುಖ್ಯ ಎಂದು ತಿಳಿಸಿದರು.

ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಬೀದಿ ಬದಿಯ ವ್ಯಾಪಾರಿಗಳಿಗೆ ಪೇಪರ್ ಬ್ಯಾಗ್ ಹಾಗೂ ಬಟ್ಟೆ ಬ್ಯಾಗ್ ಹಂಚುವ ಮೂಲಕ ಗ್ರಾಹಕರು, ವ್ಯಾಪಾರಿಗಳಿಗೆ ಬಟ್ಟೆ ಹಾಗೂ ಪೇಪರ್ ಬ್ಯಾಗ್ ಉಪಯೋಗಿಸುವಂತೆ ಅರಿವು ಮೂಡಿಸಲಾಯಿತು.

ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಜೆಸಿಐ ವಲಯ ಅಧ್ಯಕ್ಷ ಅನುಷ್‌ಗೌಡ, ಜೆಸಿಐ ಸಪ್ತಾಹ ಸಂಚಾಲಕ ಪ್ರದೀಪ್, ಪಾಲಿಕೆ ಸದಸ್ಯೆ ಭಾನುಮತಿ ವಿನೋದ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಪೊಲೀಸ್ ಸಿಬ್ಬಂದಿ, ಜೆಸಿಐ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೂರ್ನಾಲ್ಕು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ- ಡಿಸಿಎಂ ಡಿ.ಕೆ ಶಿವಕುಮಾರ್.

ಲೋಕಸಭಾ ಚುನಾವಣೆ: ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಪ್ರಬಲ ಆಕಾಂಕ್ಷಿ-ಹೆಚ್.ಎಸ್. ಸುಂದರೇಶ್

ರಾಜ್ಯದಲ್ಲಿ ‌ಎನ್ ಇಪಿ‌ ರದ್ದು:  ಹೊಸದಾಗಿ ಎಸ್ ​ಇಪಿ‌ ಅನುಷ್ಠಾನಗೊಳಿಸಲಾಗುತ್ತದೆ-ಸಚಿವ ಮಧು ಬಂಗಾರಪ್ಪ