ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪ್ರತಿಷ್ಠಿತ ಕರ್ನಾಟಕ ಸಂಘದ ಪರವಾಗಿ ಅಧ್ಯಕ್ಷ ಎಂ.ಎನ್. ಸುಂದರ ರಾಜ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸ್ವೀಕಾರ.

ಶಿವಮೊಗ್ಗ: ನಿನ್ನೆ ಸಂಜೆ ಬೆಂಗಳೂರಿನ ರವೀಂದ್ರ ನಗರ ಕಲಾಕ್ಷೇತ್ರದಲ್ಲಿ ನಡೆದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರತಿಷ್ಠಿತ ಕರ್ನಾಟಕ ಸಂಘದ ಪರವಾಗಿ ಸಂಘದ ಅಧ್ಯಕ್ಷ ಎಂ.ಎನ್. ಸುಂದರ ರಾಜ್ ಅವರು ಪ್ರಶಸ್ತಿ ಪಡೆದರು.
ಹಾಗೆಯೇ ಜಿಲ್ಲೆಯ ರಂಗಭೂಮಿ ಕ್ಷೇತ್ರದಲ್ಲಿ ಸಾಧನೆಗೈದ ಎ.ಜಿ. ಚಿದಂಬರ ರಾವ್ ಜಂಬೆ ಅವರಿಗೂ ಸಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹಾಗೂ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪುರಸ್ಕøತರಿಗೆ 5ಲಕ್ಷ ರೂ. ನಗದು, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ ನೀಡಿ ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು. ಹಿರಿಯರು, ತಜ್ಞರು, ಸಾಧಕರು ಹೊರನಾಡಿನಲ್ಲಿ ಕನ್ನಡ ಸೇವೆ ಸಲ್ಲಿಸುತ್ರಿರುವ 68 ಸಾಧಕರಿಗೆ ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ವಿತರಿಸಲಾಯಿತು.
ಪ್ರಶಸ್ತಿ ಪಡೆದ ಕರ್ನಾಟಕ ಸಂಘವು 5 ಲಕ್ಷ ರೂ.ಗಳನ್ನು ಬ್ಯಾಂಕಿನಲ್ಲಿ ಠೇವಣಿ ಇಟ್ಟು, ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿವರ್ಷ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡ ಸಂಘ ಅಥವಾ ಕನ್ನಡ ಸೇವೆಯಲ್ಲಿ ತೊಡಗಿರುವವರನ್ನು ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುವುದು ಸೂಕ್ತವಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Related posts

ವಿಪಕ್ಷ ನಾಯಕರ ಆಯ್ಕೆ ವಿಚಾರ: ಶಾಸಕರ ಅಭಿಪ್ರಾಯ ಪಡೆದು ತೀರ್ಮಾನ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಇನ್ಮುಂದೆ ವಂಚನೆಯ 420 ನಂಬರ್ ಬದಲಾವಣೆ..? ಏನಿದು..?

ನ. 18ರಂದು ಆನಂದ-ಆರೋಗ್ಯ-ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ.