ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

2024 ರಲ್ಲಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ…

ಬೆಂಗಳೂರು: 2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಂದೇಶವನ್ನು ಪ್ರಧಾನಿ ಮೋದಿ ರವಾನಿಸಿದ್ದಾರೆ.

ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯ ಭಾಗವಾಗಿ 100 ಮಹತ್ವಾಕಾಂಕ್ಷಿ ವಲಯಗಳ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, 2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ಅಕ್ಟೋಬರ್ -ನವೆಂಬರ್ ನಲ್ಲಿ ಮಹತ್ವಾಕಾಂಕ್ಷಿ ವಲಯಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳುವ ಮೂಲಕ 2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಜಾರಿಗೆ ತರಲಾದ ಮಹಾತ್ವಾಕಾಂಕ್ಷಿ ಜಿಲ್ಲಾ ಯೋಜನೆಗಳು ಸ್ಪೂರ್ತಿದಾಯಕ ಜಿಲ್ಲೆಗಳಾಗಿ ಹೊರಹೊಮ್ಮಿವೆ. ಮುಂದಿನ ವರ್ಷ ಅಕ್ಟೋಬರ್ -ನವೆಂಬರ್ ನಲ್ಲಿ ಮಹತ್ವಾಕಾಂಕ್ಷಿ ವಲಯಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

 

Related posts

545 ಪಿಎಸ್ ಐ ನೇಮಕಾತಿ ಹಗರಣ:  ಮರುಪರೀಕ್ಷೆಗೆ ಹೈಕೋರ್ಟ್ ಆದೇಶ.

ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ – ಡಿಸಿ ಡಾ. ಆರ್.ಸೆಲ್ವಮಣಿ

ದೀಪಾವಳಿ ಹಬ್ಬದ ಎಫೆಕ್ಟ್ : ವಾಯುಮಟ್ಟ ಸೂಚ್ಯಂಕದಲ್ಲಿ ಹೆಚ್ಚಳ.