ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿದ್ಯಾರ್ಥಿ ವೇತವನ್ನು ತಕ್ಷಣವೇ ಬಿಡುಗಡೆ ಆಗ್ರಹಿಸಿ ಪ್ರತಿಭಟನೆ.

ಶಿವಮೊಗ್ಗ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಈ ಮೂರೂ ಇಲಾಖೆಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ಇದರ ಜೊತೆಗೆ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೂ ಸಾವಿರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ ರಾಜ್ಯದಲ್ಲಿ ಯಾವ ವಿದ್ಯಾರ್ಥಿಗೂ ಕೂಡ ಇನ್ನೂ ವೇತನ ಸಿಕ್ಕಿಲ್ಲ ಎಂದು ಮನವಿದಾರರು ಆರೋಪಿಸಿದರು.
ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಆರ್ಥಿಕವಾಗಿ ಉಪಯೋಗವಾಗುತ್ತಿದ್ದ ಈ ವೇತನ ಇನ್ನೂ ಸಿಗದಿರುವುದು ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಆದ್ದರಿಂದ ಸರ್ಕಾರ ತಕ್ಷಣವೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ವಿಧಾತ್ರಿ ಹೆಬ್ಬಾರ್, ಪ್ರಮುಖರಾದ ಪ್ರವೀಣ್, ಶರಣ, ಅಭಿಷೇಕ್, ಪುನೀತ್, ಯಶಸ್ವಿನಿ, ಧರಣಿ, ಅಶ್ವತ್, ಅರುಣ್, ಕಾರ್ತಿಕ್, ರಘುನಂದನ್, ಸಚಿನ್ ಲೋಹಿತ್, ಸಿಂಚನ ಸೇರಿದಂತೆ ಹಲವರಿದ್ದರು.

Related posts

ಜನತಾದರ್ಶನ:  ಬಿವೈ ವಿಜಯೇಂದ್ರ ಮತ್ತು ಪ್ರೀತಂಗೌಡ ವಿರುದ್ದ ಸಿಎಂ ಸಿದ್ದರಾಮಯ್ಯಗೆ ದೂರು.

ಕ್ಯಾನ್ಸರ್ ರೋಗದ ಬಗ್ಗೆ ಇನ್ಮುಂದೆ ಭಯ ಬೇಡ: 7 ನಿಮಿಷದ ಚಿಕಿತ್ಸೆಯ ಮೊದಲ ಇಂಜಕ್ಷನ್ ಬಿಡುಗಡೆ..

ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ.