ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರ ನೇತೃತ್ವದಲ್ಲಿ ನಾಳೆ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ….

ಶಿವಮೊಗ್ಗ : ಸೆಪ್ಟಂಬರ್ 24 :  ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರ ನೇತೃತ್ವದಲ್ಲಿ ನಾಳೆ (ಸೆಪ್ಟಂಬರ್ 25ರಂದು ಬೆಳಿಗ್ಗೆ 10.30ರಿಂದ) ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯಾಲಯದ ವಿಶೇಷಾಧಿಕಾರಿಗಳು ತಮ್ಮ ಕಚೇರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ರಾಜಧಾನಿ ಬೆಂಗಳೂರಿಗೆ ಹೋಗಿ ಹಲವಾರು ರೀತಿಯ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿರುವುದನ್ನು ನಿಯಂತ್ರಿಸಿ, ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಡಳಿತಾರೂಢ ಸರ್ಕಾರದ ಆಶಯದಂತೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ನವರು ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ತಿಳಿಸಿರುವ ಅವರು, ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಅಹವಾಲುಗಳಿಗೆ, ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಿದ್ದಾರೆ ಎಂದವರು ತಿಳಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮ ನಡೆಯುವ ದಿನದಂದು ಬೆಳಿಗ್ಗೆ 9.30ರಿಂದ ನಿಗಧಿಪಡಿಸಿದ ಸ್ಥಳದಲ್ಲಿ ಖುದ್ದು ಹಾಜರಿದ್ದು ಸಾರ್ವಜನಿಕರು ತಮ್ಮ ಅವಹಾಲುಗಳನ್ನು ಸಲ್ಲಿಸಬಹುದಾಗಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡುವಂತೆ ಸಚಿವರ ವಿಶೇಷಾಧಿಕಾರಿಗಳು ಮನವಿ ಮಾಡಿದ್ದಾರೆ.

 

 

 

 

 

 

 

 

 

 

 

 

 

 

Related posts

ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ಮುಖ್ಯ-ಪೂರ್ಣಿಮಾ ಸುನೀಲ್ 

ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಉತ್ತರ ಕನ್ನಡ ಜಿಲ್ಲೆಗೆ ಎಂ ಪ್ರವೀಣ್ ಕುಮಾರ್,- ಚಿತ್ರದುರ್ಗಕ್ಕೆ ಆರ್ ಕಿರಣ್ ನೇಮಕ

ಇನ್ಮುಂದೆ ವಂಚನೆಯ 420 ನಂಬರ್ ಬದಲಾವಣೆ..? ಏನಿದು..?