ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

2024ರ ಲೋಕಸಭೆ ಚುನಾವಣೆ: ಕಾಂಗ್ರೆಸ್’ನಿಂದ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ..

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

26 ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿ ಕುರಿತು ಮಾತನಾಡಿದ ಅವರು, ಎಲ್ಲಾ ಪಕ್ಷಗಳು ಚರ್ಚೆ ಮತ್ತು ಸಮಾಲೋಚನೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು “ಅಹಂಕಾರಿ” ಸ್ವಭಾವವನ್ನು ತೋರಿಸಬಾರದು. 2014 ರಲ್ಲಿ ಬಿಜೆಪಿ ಕೇವಲ 31% ಮತಗಳಿಂದ ಅಧಿಕಾರಕ್ಕೆ ಬಂದಿರುವುದು, ಉಳಿದ 69% ಮತದಾರರು ಅವರ ವಿರುದ್ಧವಾಗಿಯೇ ಇದ್ದಾರೆ. ಈ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಚುನಾವಣೆಯಲ್ಲಿ ಸ್ಥಳೀಯ ಅಂಶಗಳೇ ಮುಖ್ಯವಾಗಿರುತ್ತವೆ. ಆದರೆ ದೇಶದ ಪ್ರಸ್ತುತ ಪರಿಸ್ಥಿತಿಯು ಎಲ್ಲಾ ಪಕ್ಷಗಳ ಮೇಲೆ ಒತ್ತಡ ಸೃಷ್ಟಿಸಿದೆ. ಸಾರ್ವಜನಿಕರು ಇಂತಹ ಒತ್ತಡ ಸೃಷ್ಟಿಸಿದ್ದು, ಎಲ್ಲ ಪಕ್ಷಗಳ ಮೈತ್ರಿಗೆ ಕಾರಣವಾಗಿದೆ ಎಂದಿದ್ದಾರೆ.

 

Related posts

ಟ್ವಿಟರ್’ ಬಳಕೆದಾರರಿಗೆ ಬಿಗ್ ಶಾಕ್: ಮಾಸಿಕ ಶುಲ್ಕ ವಿಧಿಸುವ ಬಗ್ಗೆ ಚಿಂತನೆ.

ವೋಕಲ್ ಫಾರ್‌ ಲೋಕಲ್‌ ‘ಗೆ ಪ್ರಧಾನಿ ಮೋದಿ ಒತ್ತು: ಯುಪಿಐ ಬಳಸಿ ಎಂದೂ ಕರೆ

‘ಝೀ-ಸೋನಿ’ ವೀಲನಕ್ಕೆ ಕೂಡಿ ಬಂತು ಕಾಲ..