ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಭಾಗಿಯಾಗಲಿದ್ದಾರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ.

ಮೈಸೂರು :  ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಾಲನೆ ಸಿಗಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ  ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಗೃಹಲಕ್ಷ್ಮೀ ಯೋಜನೆಗೆ ಚಾಲನೆ  ನೀಡಲಿದ್ದಾರೆ.

ಈ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಕಾನೂನು & ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ 2000ಕ್ಕೂ ಹೆಚ್ಚು ಸಿಬ್ಬಂದಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಮುತ್ತುರಾಜ್, 10 ಎಸ್​​ಪಿಗಳು ಸೇರಿ ಅಧಿಕಾರಿಗಳಿಂದ ಭದ್ರತೆ  ವಹಿಸಲಾಗಿದೆ.

Related posts

ದೇಶದಲ್ಲಿ 1.59 ಲಕ್ಷಕೋಟಿ ಜಿಎಸ್ ಟಿ ಸಂಗ್ರಹ: ಕರ್ನಾಟಕದ ಪಾಲು ಎಷ್ಟು ಗೊತ್ತೆ..?

ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಬಿರುಸು…

ಕೃಷಿ ವ್ಯವಸ್ಥಿತವಾದರೆ ಸಾಹಿತ್ಯದ  ನೆಲೆ ಗಟ್ಟಿಯಾಗುತ್ತದೆ-ನಾಡೋಜ ಡಾ.ಮಹೇಶ ಜೋಶಿ