ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಸೇರಿಸಲು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ರಮೇಶ್ ಶೆಟ್ಟಿ ….

ಸೊರಬ 13: 1995ರ ನಂತರ ಪ್ರಾರಂಭವಾದ ಶಾಲಾ ಕಾಲೇಜುಗಳನ್ನು ವೇತನ ಅನುದಾನಕ್ಕೆ ಸೇರಿಸುವಂತೆ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್  ಆಕಾಂಕ್ಷಿ ಎಂ.ರಮೇಶ್ ಶೆಟ್ಟಿಯವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧುಬಂಗಾರಪ್ಪನವರಿಗೆ   ಇಂದು ಮನವಿ ಮಾಡಿದರು.
ಅವರು ಇಂದು ಸೊರಬದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮನವಿ ಪತ್ರ ಸಲ್ಲಿಸಿದರು.
ವೇತನಾನುದಕ್ಕೆ  ಒಳಪಡಿಸದೇ ಇರುವುದರಿಂದ ಕನ್ನಡ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಲೇಜುಗಳನ್ನು ನಡೆಸುತ್ತಿರುವ ಆಡಳಿತ ಮಂಡಳಿಗಳಿಗೆ ಕಾಲೇಜಿನಿಂದ ಯಾವುದೇ ರೀತಿಯ ಸ್ವಯಂ ಸಂಪನ್ಮೂಲ ಕ್ರೂಡೀಕರಣವಾಗದೇ ಶಿಕ್ಷಕರುಗಳಿಗೆ ಸಂಬಳ-ವಗೈರೆಗಳನ್ನು ನೀಡಲಾರದ ಸ್ಥಿತಿಗೆ ತಲುಪಿವೆ. ಇದರಿಂದ ಕನ್ನಡ ಶಾಲೆಗಳ ಶೈಕ್ಷಣಿಕ ಬೆಳವಣಿಗೆಗೆ ಬಾರೀ ಹಿನ್ನಡೆ ಉಂಟಾಗಿದೆ.
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನ ಅನುದಾನಕ್ಕೆ ಒಳಪಡಿಸುವಂತೆ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟವು ಆನೇಕ ವರ್ಷಗಳಿಂದ ಒತ್ತಾಯಿಸುತ್ತಾ ಬಂದಿರುವುದು ತಮಗೆ ತಿಳಿದಿರುವ ವಿಚಾರ.
ಈ ಹಿನ್ನೆಲೆಯಲ್ಲಿ ಹಂತ-ಹಂತವಾಗಿ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನ ಅನುದಾನಕ್ಕೆ ಒಳಪಡಿಸುವ ಮೂಲಕ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸಹಾಯ ಮಾಡಬೇಕಾಗಿ ರಮೇಶ್ ರವರು ಮನವಿಯಲ್ಲಿ ಕೋರಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಕೋಆರ್ಡಿನೇಟರ್ ಹಾಗೂ ಡಿ ಕೆ ಶಿವಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಆರ್.ಮೋಹನ್,  ಹಿಂದುಳಿದ ವರ್ಗಗಳ ರಾಜ್ಯ ಘಟಕದ ಸಂಯೋಜಕರಾದ ಜಿ.ಡಿ.ಮಂಜುನಾಥ್ ಇದ್ದರು.

Related posts

ಐಟಿ ಮತ್ತು ಇಡಿ ಮೂಲಕ  ವಿಪಕ್ಷ ಮುಗಿಸಲು ಬಿಜೆಪಿ ಸಂಚು-ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಅಧಿಕಾರ ಅವಧಿ 5 ವರ್ಷ ವಿಸ್ತರಣೆಗೆ ಚಿಂತನೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೆಎಸ್ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಎಸ್ಪಿಗೆ ಮನವಿ.