ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು ಬಂಗಾರಪ್ಪನವರು – ದೀನಬಂಧು ಸೇವಾಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ ಅಭಿಮತ

ಶಂಕರಘಟ್ಟ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರಿ ಸೇವೆಗೆ ಸೇರಲು ಹಾಗೂ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಸಲುವಾಗಿ ಶೇ 15 ರಷ್ಟು ಕೃಪಾಂಕ ನೀಡುವುದರ ಮೂಲಕ ಸಾವಿರಾರು ಗ್ರಾಮೀಣ ಬಡ ವಿದ್ಯಾರ್ಥಿಗಳ ಬಾಳನ್ನು ಬೆಳಗಿದವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ:ಎಸ್.ಬಂಗಾರಪ್ಪನವರು ಎಂದು ದೀನಬಂಧು ಸೇವಾಟ್ರಸ್ಟ್ ಅಧ್ಯಕ್ಷರಾದ ಎಂ.ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ಇಂದು ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿರುವ ದೀನಬಂಧು ಸೇವಾ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿ:ಬಂಗಾರಪ್ಪನವರ 90ನೇ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ಆಗಿನ ಸಮಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರದ ವಿದ್ಯಾರ್ಥಿಗಳ ಸಮನಾಗಿ ಅಂಕಗಳನ್ನು ಪಡೆಯಲು ಸಾಧ್ಯವಾಗದೇ ಸರ್ಕಾರಿ ಸೇವೆಯಿಂದ ವಂಚಿತರಾಗುತ್ತಿದ್ದನ್ನು ಮನಗಂಡು ಕೃಪಾಂಕ ನೀಡುವಂತಹ ಐತಿಹಾಸಿಕ ನಿರ್ಣಯ ತೆಗೆದುಕೊಂಡ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ತಮ್ಮ ಬದುಕಿಗೆ ನೆಲೆ ಕಂಡುಕೊಂಡರು. ಇಷ್ಟೇ ಅಲ್ಲ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಬಡವರಿಗೆ ಮನೆ ಕಟ್ಟಿ ಕೊಡುವ ಆಶ್ರಯ, ಅಕ್ಷಯ, ಆರಾಧನಾ, ವಿಶ್ವ ಇಂತಹ ಹತ್ತಾರು ಕಾರ್ಯಕ್ರಮಗಳ ಮೂಲಕ ಸಮಾಜ ಕಟ್ಟಕಡೆಯ ವ್ಯಕ್ತಿಗೆ ಸಹಾಯ ಮಾಡಿದ ಕೀರ್ತಿ ಬಂಗಾರಪ್ಪನವರಿಗೆ ಸಲ್ಲುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಸಿಂಗನಮನೆ ಗ್ರಾ.ಪಂ. ಅಧ್ಯಕ್ಷರಾದ ಮಂಜುಳಮ್ಮ, ತಾವರಘಟ್ಟ ಗಾ.ಪಂ. ಉಪಾಧ್ಯಕ್ಷ ಗಿರೀಶ್, ಕಾಂಗ್ರೆಸ್ ಮುಖಂಡರುಗಳಾದ ಮುರುಗೇಶ್, ಶಶಿಕುಮಾರ್, ಕವಿತಾ ರುದ್ರೇಶ್, ಅಶ್ವಿನಿ ಶಶಿಕುಮಾರ್, ಲಲಿತಮ್ಮ,ಲಕ್ಷ್ಮಮ್ಮ, ತಿಪ್ಪೇರುದ್ರಸ್ವಾಮಿ, ಮಂಟಲಿಂಗಯ್ಯ. ಶ್ರೀಕಾಂತ್ ಮುಂತಾದವರುಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಸರ್ಕಾರಿ ಶಾಲೆಯ ಬಡಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

Related posts

ಬಯಸದೇ ಬಂದ ಭಾಗ್ಯ: ಹತ್ತೇ ಸೆಕೆಂಡ್ ನಲ್ಲಿ ಲಕ್ಷಾಧಿಪತಿ: ಬರಿಗೈಯಲ್ಲಿ ಬಂದವನಿಗೆ ಸಿಕ್ತು 94 ಲಕ್ಷ ರೂ. ಹಣ. ಮುಂದೇನಾಯ್ತು…?

ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ಗೆ ಲಾಭವೋ…? ನಷ್ಟವೋ..?

ಗಾಂಧೀಜಿ  ಹಾಗೂ ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ-ಸಿಎಂ ಸಿದ್ದರಾಮಯ್ಯ