ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಕರಪತ್ರ ಬಿಡುಗಡೆ.

ಶಿವಮೊಗ್ಗ:  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ ದಿನಾಂಕ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌ದ ಪ್ರಯುಕ್ತ ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಕರಪತ್ರವನ್ನು ದಿನಾಂಕ 15/09/2023ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ಇದರ ಅಧ್ಯಕ್ಷ  ಮುರಲೀಧರ ಹೆಗ್ಡೆಯವರು ಬಿಡುಗಡೆ ಮಾಡಿದರು.

ಜಾಗತಿಕ ಸಂಘಗಳ ಒಕ್ಕೂಟದ ಅದ್ಯಕ್ಷರಾದ ಶ್ರೀ ಐಕಳ ಹರೀಶ ಶೆಟ್ಟಿಯವರು ಕಾರ್ಯಕ್ರಮದ ವಿವರ ನೀಡಿ ಬೆಂಗಳೂರಿನ ಸಮಸ್ತ ಬಂಟರನ್ನು ಕಾರ್ಯಕ್ರಮಕ್ಕೆ ಪ್ರಿತಿಪೂರ್ವಕವಾಗಿ ಆಹ್ವಾನಿಸಿದರು. ಶ್ರೀ ಅಜಿತ್ ಶೆಟ್ಟಿ ಉಳ್ತುರು ಇವರು ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾಸಮಿತಿ ಸಂಚಾಲಕರಾದ ಶ್ರೀ ಗಿರೀಶ್ ಶೆಟ್ಟಿ ತೆಳ್ಳರ್ ಮತ್ತು ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಶ್ರೀ ಚಂದ್ರಹಾಸ ಶೆಟ್ಟಿಯವರು ಕಾರ್ಯಕ್ರಮದ ರೂಪುರೇಷೆ, ನಿಯಮಗಳ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಶ್ರೀ ಐಕಳ ಹರೀಶ್ ಶೆಟ್ಟಿಯವರನ್ನು ಬೆಂಗಳೂರು ಬಂಟರ ಸಂಘದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕರಾದ ಶ್ರೀ ಅಶೋಕ್ ಶೆಟ್ಟಿ ಬೆಳ್ಳಾಡಿ, ಶ್ರೀ ಎಂ‌. ನಂದ್ಯಪ್ಪ ಶೆಟ್ಟಿ ಗೌ ಕಾರ್ಯದರ್ಶಿ ಬಂಟರ ಸಂಘ ಮೈಸೂರ್,ಒಕ್ಕೂಟದ ಉಪಾಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾದಿಕಾರಿ ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿ, ಬಂಟರ ಸಂಘ ಬೆಂಗಳೂರು ಇದರ‌ ಮಾಜಿ ಅಧ್ಯಕ್ಷರಾದ ಶ್ರೀ ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಶ್ರೀ ಆನಂದರಾಮ‌‌ಶೆಟ್ಟಿ, ಉಪಾದ್ಯಕ್ಷರಾದ ಡಾ. ಜಗದೀಶ ಶೆಟ್ಟಿ, ಶ್ರೀಮತಿ ಗೀತಾಂಜಲಿ ಅಜಿಲ, ಖಜಾಂಚಿ ಶ್ರೀ ಅಮರನಾಥ‌ಶೆಟ್ಟಿ ಜೊತೆ ಕಾರ್ಯದರ್ಶಿ ಶ್ರೀಮತಿ ಶ್ಯಾಮಲ ಶೆಟ್ಟಿ,ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸುದೀಪ ನೈಕ್ ,ಶ್ರೀ ಕೀರ್ತನ್ ಶೆಟ್ಟಿ, ಶ್ರೀ ನಿರಂಜನ್ ಶೆಟ್ಟಿ, ಶ್ರೀಮತಿ ಜಯಶ್ರೀ ಸಿ ರೈ, ಶ್ರೀ ಸುಧಾಕರ ಶೆಟ್ಟಿ, ಶ್ರೀ ಸಂದೀಪ ಶೆಟ್ಟಿ,ಶ್ರೀ ಕಿರಣ್ ಶೆಟ್ಟಿ, ಮಾಜಿ ಅದ್ಯಕ್ಷರಾದ ಚಂದ್ರಹಾಸ ರೈ,‌ಮಾಜಿ ಉಪಾಧ್ಯಕ್ಷರಾದ ಬೋಜರಾಜ ಶೆಟ್ಟಿ ಕೊರ್ಗಿ,‌ಮಾಜಿ‌ ಕಾರ್ಯದರ್ಶಿ ಮಧುಕರ ಶೆಟ್ಟಿ, ಹಾಗೂ ಬಂಟರ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

Related posts

*ಚಾರಣ ಕ್ಷೇತ್ರದಲ್ಲಿ ಅ.ನಾ.ವಿಜಯೇಂದ್ರರಾವ್ ಸಂಘಟನಾತ್ಮಕ ಕೆಲಸ-ಎನ್.ಗೋಪಿನಾಥ್

ಚುನಾವಣೆಯಲ್ಲಿ ಗೆಲುವಿಗಾಗಿ ‘ಚಪ್ಪಲಿ ಏಟು’ ತಿಂದ ಅಭ್ಯರ್ಥಿ..

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಈ ವರ್ಷವೂ `ಉಚಿತ ಸೈಕಲ್’ ವಿತರಣೆ ಇಲ್ಲ!