ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ ಆಗಸ್ಟ್ 29ಕ್ಕೆ

ಶಿವಮೊಗ್ಗ: ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 29ರ ಬೆಳಗ್ಗೆ 10ಕ್ಕೆ ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 29ರ ಬೆಳಗ್ಗೆ 10ಕ್ಕೆ ಆಯೋಜಿಸಿರುವ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಉದ್ಘಾಟಿಸುವರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಶಿವರಾಜ್.ಎಚ್.ಪಿ. ಅಧ್ಯಕ್ಷತೆ ವಹಿಸುವರು.
ವಿಶೇಷ ಕಾರ್ಯಕ್ರಮವು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೂ ನಡೆಯಲಿದ್ದು, ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ, ಎಎಸ್‌ಪಿ ಅನಿಲ್‌ಕುಮಾರ್ ಎಸ್.ಭೂಮರೆಡ್ಡಿ, ಟ್ರಾಫಿಕ್ ಪೊಲೀಸ್ ವೃತ್ತ ನೀರಿಕ್ಷಕ ಸಂತೋಷ್‌ಕುಮಾರ್ ಡಿ.ಕೆ., ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪೀಟರ್ ಸೈಮನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ರೋಟರಿ ಜಿಲ್ಲಾ ಯೋಜನಾ ಚೇರ‍್ಮನ್ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ರವಿ ಕೋಟೋಜಿ, ವಲಯ ಪ್ರತಿನಿಧಿ ಧರ್ಮೇಂದರ್ ಸಿಂಗ್, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಕಿರಣ್‌ಕುಮಾರ್.ಜಿ. ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಲಯ ಸಂಯೋಜಕ ರಮೇಶ್ ಎನ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಿಜೆಪಿಯಲ್ಲಿ ದುಡ್ಡು ಕೊಟ್ಟು ಟಿಕೆಟ್ ಪಡೆಯುವ ಸಂಸ್ಕೃತಿ ಇಲ್ಲ- ಮಾಜಿ ಸಚಿವ ಅರಗ ಜ್ಞಾನೇಂದ್ರ.

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ/ ಹೊಲಿಗೆ ತರಬೇತಿ ನೀಡಲು ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ