ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿವಮೊಗ್ಗ ದಸರಾ: ಅ.15 ಹಾಗೂ ಅ.17ರಿಂದ 21ರ ವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ.

ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದಲ್ಲಿ ಯುವ ದಸರಾ ವತಿಯಿಂದ ಅ.15 ಹಾಗೂ ಅ.17ರಿಂದ 21ರ ವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಯುವ ದಸರಾ ಸಮಿತಿ ಅಧ್ಯಕ್ಷ ನಾಗರಾಜ ಕಂಕಾರಿ ತಿಳಿಸಿದರು.
ಅವರು ಇಂದು ಪಾಲಿಕೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅ.15ರ ಸಂಜೆ 4-30ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ದೇಹದಾಢ್ರ್ಯ ಸ್ಪರ್ಧೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಉದ್ಘಾಟಿಸಲಿದ್ದು, ಅ.17ರ ಬೆಳಿಗ್ಗೆ 10-30ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುವ ಟ್ರಸರ್ ಹಂಟ್ ಅನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್ ಉದ್ಘಾಟಿಸಲಿದ್ದಾರೆ ಎಂದರು.
ಅ.18 ರ ಸಂಜೆ 5-30ಕ್ಕೆ ಶಿವಪ್ಪ ನಾಯಕ ಮಾಲ್‍ನಲ್ಲಿ ನಡೆಯುವ ಟ್ಯಾಲೆಂಟ್ ಹಂಟ್ ಅನ್ನು ಮೇಯರ್ ಎಸ್. ಶಿವಕುಮಾರ್ ಉದ್ಘಾಟಿಸಲಿದ್ದಾರೆ. 19ರಂದು ಸಂಜೆ 4ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಕಬಡ್ಡಿ ಪಂದ್ಯಾವಳಿಯನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಉದ್ಘಾಟಿಸುವರು ಎಂದರು.
ಅ.20ರ ಸಂಜೆ 5 ಗಂಟೆಗೆ ಫ್ರೀಡಂ ಪಾರ್ಕ್‍ನಲ್ಲಿ ನಡೆಯುವ ಮ್ಯೂಸಿಕಲ್ ನೈಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಉದ್ಘಾಟಿಸಲಿದ್ದು, ಬಸವಕೇಂದ್ರದ ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್. ಅರುಣ್, ಎಸ್. ರುದ್ರೇಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇನ್ನಿತರರು ಆಗಮಿಸಲಿದ್ದಾರೆ. ನಂತರ ನಡೆಯುವ ಮ್ಯೂಸಿಕಲ್ ನೈಟ್‍ನಲ್ಲಿ ಖ್ಯಾತ ಪಾಪ್ ಗಾಯಕ್ ಚಂದನ್ ಶೆಟ್ಟಿ, ಅನನ್ಯ ಭಟ್, ಐಶ್ವರ್ಯ, ಅಜಯ್, ದೀಪುಜಯಶೀಲನ್ ಭಾಗವಹಿಸಲಿದ್ದಾರೆ ಎಂದ ಅವರು, ಅ.21ಸಂಜೆ 5-30ಕ್ಕೆ ಫ್ರೀಡಂ ಪಾರ್ಕ್‍ನಲ್ಲಿ ನಡೆಯುವ ಜಿಲ್ಲಾಮಟ್ಟದ ನೃತ್ಯ ಸ್ಪರ್ಧೆಯನ್ನು ಶಾಸಕಿ ಶಾರದಾ ಪೂರ್ಯಾ ನಾಯ್ಕ ಉದ್ಘಾಟಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಉಪ ಮೇಯರ್ ಲಕ್ಷ್ಮಿ ಶಂಕರ ನಾಯ್ಕ, ಎಸ್. ಜ್ಞಾನೇಶ್ವರ್, ಅನಿತಾ ರವಿಶಂಕರ್, ರೇಖಾ ರಂಗನಾಥ್, ಮಂಜುಳಾ ಶಿವಣ್ಣ ಇನ್ನಿತರರಿದ್ದರು.

Related posts

ಆ.25ರಿಂದ ಸೆ.8ರವರೆಗೆ ನೇತ್ರದಾನ ಜಾಗೃತಿ ಪಾಕ್ಷಿಕ ಮಾಸಾಚರಣೆ: ಜಾಗೃತಿ ಜಾಥಾ.

ಸರ್ಕಾರದ ನಿರ್ಧಾರ: ಈ ವರ್ಷ ‘ಶಿಕ್ಷಕ ವರ್ಗಾವಣೆ’ ಇಲ್ಲ:

ರೈಲ್ವೆ ಅಂಡರ್ ಪಾಸ್ ಲೋಕಾರ್ಪಣೆ ಮಾಡಿದ ಸಂಸದ ಬಿ.ವೈ. ರಾಘವೇಂದ್ರ.