ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೈಕ್ ಸವಾರನಿಗೆ ಕಾರು ಡಿಕ್ಕಿ: ಹಿಟ್ ಅಂಡ್ ರನ್ ಕೇಸ್ ನಲ್ಲಿ ಸಿಲಿಕಿಕೊಂಡ್ರಾ ಕಾಮಿಡಿ ಸ್ಟಾರ್ ಚಂದ್ರಪ್ರಭ ಜಿ…?

ಚಿಕ್ಕಮಗಳೂರು: ಕಾಮಿಡಿ ಸ್ಟಾರ್ ಚಂದ್ರಪ್ರಭ ಜಿ. ಅವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾಗಿದ್ದು, .ಆರೋಗ್ಯ ಸ್ಥಿತಿ ಗಂಭೀರ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ

ಚಿಕ್ಕಮಗಳೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಂಧ್ರಪ್ರಭಾ ಅವರ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಚಂದ್ರಪ್ರಭ ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.  ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಸಂಬಂಧ ಚಂದ್ರಪ್ರಭಾ ಅವರಿಗೆ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ನೀಡಿದ್ದು, ಶೂಟಿಂಗ್ ಹಿನ್ನೆಲೆ ನಾಳೆ ಹಾಜರಾಗುವುದಾಗಿ ಚಂದ್ರಪ್ರಭಾ ತಿಳಿಸಿದ್ದಾರೆ ಎನ್ನಲಾಗಿದೆ.

Related posts

ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಾವೇರಿ ನದಿ ಮೂಲಕ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ.

ಮಹಿಳಾ ಉದ್ಯಮಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ- ಮೇಯರ್ ಎಸ್.ಶಿವಕುಮಾರ್

ಬೆಂಗಳೂರು ವಿಶ್ವವಿಶ್ವವಿದ್ಯಾಲಯ ಘಟಿಕೋತ್ಸವ: ಬಡ ವಿದ್ಯಾರ್ಥಿಗೆ ‍ಪ್ರಥಮ ರ್‍ಯಾಂಕ್