ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೌತ್ ಜೋನ್ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಸ್ನೇಹ ಎಸ್ ಗೆ ಬೆಳ್ಳಿ ಪದಕ “

ಶಿವಮೊಗ್ಗ: ತಮಿಳುನಾಡಿನ ಕೊಯಮತ್ತೂರಿನ ರಾಕ್ಸ್ ಬ್ಯಾಡ್ಮಿಂಟನ್ ಅಕಾಡೆಮಿಯವರು ಆಯೋಜಿಸಿರುವ ಸೌತ್ ಜೋನ್ ಇಂಟರ್ ಸ್ಟೇಟ್ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡದ ಪರವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಗುರುಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಸ್ನೇಹ ಎಸ್ ಸ್ಪರ್ಧಿಸಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್‌ಗೆ ಆಯ್ಕೆ ಯಾಗಿರುತ್ತಾಳೆ.

ಇವರು ಕಿರಿಯ ವಯಸ್ಸಿನಲ್ಲಿ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಸ್ನೇಹ ಎಸ್. ದೇಶದ ಪ್ರಮುಖ ಆಟಗಾರ್ತಿ ಆಗುವ ಭರವಸೆ ಮೂಡಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಗುರುಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪ್ರತಿಭೆಯಾಗಿರುವ ಸ್ನೇಹ, ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗಮಾಡುತ್ತಿದ್ದು, ಆಟದ ಜೊತೆಗೆ ಓದಿನಲ್ಲಿಯೂ ಮುಂದಿದ್ದಾಳೆ.
ಮಹಿಳೆಯರ ೧೯ ವರ್ಷ ವಯೋಮಿತಿ ಒಳಗಿನ ದಕ್ಷಿಣ ಭಾರತದ ಅಂತರ್ ರಾಜ್ಯ ಚಾಂಪಿಯನ್ ಕ್ರೀಡಾಕೂಟವು ಆಗಸ್ಟ್ ೧೧ ರಿಂದ ೧೪ ರವರೆಗೆ ನಾಲ್ಕು ದಿನ ನಡೆದ ಕ್ರೀಡಾಕೂಟದಲ್ಲಿ ಸ್ನೇಹ ಎಸ್. ಅತ್ಯುತ್ತಮವಾಗಿ ಆಟದ ಪ್ರದರ್ಶನ ನೀಡಿ , ದ್ವಿತೀಯ ಸ್ಥಾನ ಪಡೆದು, ಬೆಳ್ಳಿಪದಕ ಹಾಗೂ ಅತ್ಯಾಕರ್ಷಕ ಟ್ರೋಪಿಯನ್ನು ಪಡೆದು,ಈ ಕ್ರೀಡಾ ಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆ,ರಾಜ್ಯ ಮತ್ತು ಸಂಸ್ಥೆಗೆ ಕೀರ್ತಿ ತಂದಿರುತ್ತಾಳೆ.
ಈ ಪ್ರತಿಭೆಯೂ ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರಿ ರಾಗಿರುತ್ತಾಳೆ. ಇವಳು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ವಿನೋದ್ ಕುಮಾರ್ ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ.
ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಭಾಗವಹಿಸುವ ಅರ್ಹತೆಯನ್ನು ಪಡೆದುಕೊಂಡಿರುತ್ತಾಳೆ. ಈ ಪ್ರತಿಭಾನ್ವಿತೆಯು ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಮತ್ತು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Related posts

ಏಕದಿನ ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದು ಭಾರತ ಬ್ಯಾಟಿಂಗ್ ಆಯ್ಕೆ.

ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ಹೊಸ ಶಾಖೆ ಆರಂಭ-ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ.

ಕೇವಲ ಸಣ್ಣ ಪುಟ್ಟ ಅಲ್ಲ: ದೊಡ್ಡ ಲೀಡರ್ ಗಳೇ ಕಾಂಗ್ರೆಸ್ ಗೆ ಬರ್ತಾರೆ- ಸಚಿವ ಎಂ.ಬಿ ಪಾಟೀಲ್