ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸುವುದು ಅಗತ್ಯ- ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ

ಶಿವಮೊಗ್ಗ: ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕೃತಿ ಪರಂಪರೆಯ ಅರಿವು ಮೂಡಿಸುವುದು ಅಗತ್ಯ. ಸಂಸ್ಕಾರ ಗುಣಗಳನ್ನು ಬಾಲ್ಯದಲ್ಲಿ ಅಳವಡಿಸಿಕೊಳ್ಳುವಂತೆ ಪೋಷಕರು ಮಾರ್ಗದರ್ಶನ ನೀಡಬೇಕು ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಶಿವಮೊಗ್ಗ ಬಸವೇಶ್ವರ ನಗರ ಪಶ್ಚಿಮ ಭಾಗದಲ್ಲಿ ಪ್ರತಿಷ್ಠಾಪಿಸಿರುವ ಶಿವಾಲಯದ ಶಿವಲಿಂಗ ಪುನರ್ ಪ್ರತಿಷ್ಠಾಪನೆ, ಪ್ರಾಣ ಪ್ರತಿಷ್ಠಾಪನೆ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಹೊಸ ಯುಗದಲ್ಲಿ ಧರ್ಮದ ಬಗ್ಗೆ ಯುವ ಸಮುದಾಯ ಜಾಗೃತಿ ಹೊಂದಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ, ಧರ್ಮ, ಆಚಾರ, ವಿಚಾರ, ಸೇವೆ ಹಾಗೂ ಸತ್ಕಾರ್ಯಗಳು ಜೀವನದಲ್ಲಿ ಅತ್ಯಂತ ಮುಖ್ಯ. ನಾವು ಮಾಡಿದ ದಾನ, ಸೇವೆ ನಮ್ಮನ್ನು ಸದಾ ಕಾಪಾಡುತ್ತದೆ. ಇಂತಹ ಧರ್ಮಸಭೆ, ದೇವತಾ ಕಾರ್ಯಗಳು ಧರ್ಮ ಜಾಗೃತಿ ಮೂಡಿಸುತ್ತವೆ. ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.

ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಶಿವಮೊಗ್ಗ ನಗರ ಸುಂದರವಾಗಿ ರೂಪುಗೊಂಡಿದ್ದು, ಬಡಾವಣೆಯು ಹೆಚ್ಚಿನ ಅನುದಾನದಿಂದ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮುಂದಿನ ದಿನಗಳಲ್ಲಿಯೂ ಅಭಿವೃದ್ಧಿ ನಡೆಯಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಇ.ವಿಶ್ವಾಸ್ ಮಾತನಾಡಿ, ಐದು ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ವಾರ್ಡ್ ವ್ಯಾಪ್ತಿಯಲ್ಲಿ ಮಾಡಿದ್ದೇನೆ. ಎಲ್ಲರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.

ಶ್ರೀ ಡಾ. ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಶಿಲಾವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡಿ ಪೂಜೆ ನೆರವೇರಿಸಿದರು. ಪ್ರಮುಖರಾದ ಬಿ.ಜಿ.ಚಂದ್ರಪ್ಪ, ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್ಕ್, ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಎ.ರಾಜಪ್ಪ, ಎಸ್.ಸೋಮಶೇಖರಪ್ಪ, ಕೆ.ಆರ್.ವಿಜಯ್‌ಕುಮಾರ್, ಜೆ.ವಿ.ಚಂದ್ರಶೇಖರ್, ನಾಗರಾಜ್, ಎಚ್.ಎಸ್.ಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆತಂಕಪಡುವ ಅವಶ್ಯಕತೆ ಇಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಕಾವೇರಿ ನೀರಿಗಾಗಿ ಹೋರಾಟ:   ಸೆ.26 ರಂದು ಬೆಂಗಳೂರು ಬಂದ್.