ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್:  ಬಿಎಲ್ ಸಂತೋಷ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಟೀಕೆ

ಬೆಂಗಳೂರು:  ಕಾಂಗ್ರೆಸ್ ನ 40 ರಿಂದ 45 ಮಂದಿ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಬಿ.ಎಲ್ ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ.  ಬಿಎಸ್​ ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್ ಎಂದು ವ್ಯಂಗ್ಯವಾಡಿದೆ.

ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.

Related posts

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿ

ಸಮಸಮಾಜ ಯುವ ಸಮೂಹದ ಗುರಿಯಾಗಲಿ-ಸ್ವಾಮಿ ವೀರೇಶಾನಂದ ಸರಸ್ವತಿ ಸ್ವಾಮೀಜಿ

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ-ವಾಗ್ಮಿ ರಾಯಚೂರು ಕೃಷ್ಣಾಚಾರ್