ಕನ್ನಡಿಗರ ಪ್ರಜಾನುಡಿ
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಈದ್ ಮಿಲಾದ್ ರ್ಯಾಲಿ ವೇಳೆ ಕಲ್ಲು ತೂರಾಟ: ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿ.

ಶಿವಮೊಗ್ಗ: ಮಲೆನಾಡು ಶಿವಮೊಗ್ಗ  ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ.

ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು. ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್​ ಜಾರಿ ಮಾಡಲಾಗಿದೆ.

ಈದ್​ ಮಿಲಾದ್​ ಅಂಗವಾಗಿ ಶಿವಮೊಗ್ಗದಲ್ಲಿ ಬೃಹತ್​ ಮಟ್ಟದಲ್ಲಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಮೆರವಣಿಗೆ ರಾಗಿಗುಡ್ಡ ತಲುಪಿದ ವೇಳೆ ಕಟೌಟ್​ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆಯಾಗಿದೆ. ಈ ವೇಳೆ ಕೆಲ ವ್ಯಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಸ್ಥಳಕ್ಕೆ ರ್ಯಾಪಿಡ್​ ಆಯಕ್ಷನ್​ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಎಸ್​ಪಿ ಜಿ.ಕೆ ಮಿಥುನ್ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ದ್ವಿತೀಯ ಪಿಯು ಪರೀಕ್ಷೆ ಪ್ರಶ್ನೆ ಪತ್ರಿಕೆ ಸರಳಗೊಳಿಸಿದ ಶಿಕ್ಷಣ ಇಲಾಖೆ.

ನನ್ನ ಅನುವಾದಕರಾಗಿರುವುದು ಅತ್ಯಂತ ಅಪಾಯದ ಕೆಲಸ- ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನುಡಿ.

ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರಿಗೆ ಸಿಗುವ ಸೌಲಭ್ಯ ಕಡಿತ ಬೇಡ.