ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅತಿಥಿ ಉಪನ್ಯಾಸಕರ ಸೇವಾ ಖಾಯಾಂತಿಗೆ ಆಗ್ರಹಿಸಿ ಪ್ರತಿಭಟನೆ , ಮನವಿ ಸಲ್ಲಿಕೆ.

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವಾ ಖಾಯಾಂತಿಗೆ ಆಗ್ರಹಿಸಿ ಇಂದು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ವಿಭಾಗ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿ ಮುಂಭಾಗ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರ ಸೇವೆಯನ್ನು ಅವಲಂಭಿಸಿದ್ದು, ಕಳೆದ 15-20 ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿದ್ದು, ಇಂದು ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಈ ಅತಿಥಿ ಎಂಬ ಅನಿಷ್ಠ ಪದ್ಧತಿಯನ್ನು ಮುಕ್ತಾಯ ಮಾಡಿ ಸೇವಾ ಖಾಯಾಂತಿ ನೀಡಬೇಕು. ಒಂದು ವೇಳೆ ಖಾಯಂಗೊಳಿಸದಿದ್ದರೆ, ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಮುಂಭಾಗ ಅರ್ನಿಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.
ಈಗಾಗಲೇ ಹಿಂದೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರವರು ವಿರೋಧ ಪಕ್ಷದಲ್ಲಿ ಇದ್ದಾಗ ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಕುರಿತು ಸದನದಲ್ಲಿ ಚರ್ಚೆ ನಡೆಸಿದ್ದರು. ಖಾಯಂಗೊಳಿಸುವಂತ್ತೆ ಆಗ್ರಹಿಸಿದ್ದರು. ಈಗ ಅವರದೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಅತಿಥಿ ಉಪನ್ಯಾಸಕರನ್ನು ಸೇವಾ ಖಾಯಂತಿ ಮಾಡಬೇಕು ಸಚಿವ ಸಂಪುಟದಲ್ಲಿ ಚರ್ಚಿಸಿ ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು. ಈಗಾಗಲೇ ಪಶ್ಚಿಮ ಬಂಗಾಳ, ಪಂಜಾಬ್, ಹರಿಯಾಣ, ದೆಹಲಿ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅತಿಥಿ/ಅರೆಕಾಲಿಕ/ಗುತ್ತಿಗೆ ಆಧಾರಿತ ಉಪನ್ಯಾಸಕರನ್ನು ಖಾಯಂಗೊಳಿಸಲಾಗಿದೆ. ಆಗಾಗಿ ಪ್ರಸ್ತುತ2023/24ನೇ ಶೈಕ್ಷಣಿಕ ವರ್ಷದಿಂದಲೇ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಸೇವಾ ಖಾಯಂತಿ ನೀಡಬೇಕು ಎಂದು ಮನವಿಯಲ್ಲಿ ಸರ್ಕಾರಕ್ಕೆ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಡಾ. ಯಶೋಧರ್, ಸುವರ್ಣಮ್ಮ, ಡಾ.ಜಗದೀಶ್, ಶಕೀಲ್ ಅಹಮ್ಮದ್, ಶಿವಕುಮಾರ್, ನಾಗರ್ಷ, ವಸಂತಕುಮಾರ್ ಹಾಗೂ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Related posts

ಬೆಂಗಳೂರು ಬಂದ್ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟಗಳು.

ನಮ್ಮಲ್ಲಿರುವ ಆತ್ಮವಿಶ್ವಾಸ ಎಂದಿಗೂ ಸೋಲಬಾರದು-ಶೋಭಾ ವೆಂಕಟರಮಣ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ನಾಳೆ ಶಿವಮೊಗ್ಗಕ್ಕೆ ಬಿವೈ ವಿಜಯೇಂದ್ರ