ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನೋಟಿಸ್.

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ತೆರವು ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕರ್ನಾಟಕ ಡಿಸಿಎಂ ​ ಡಿಕೆ ಶಿವಕುಮಾರ್ಗೆ ನೋಟಿಸ್ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ತರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ತಡೆ ತೆರವು ಕೋರಿ ಸಿಬಿಐ  ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಸಿಎಂ ಡಿಕೆ ಶಿವಕುಮಾರ್ ​ಗೆ ನೋಟಿಸ್ ನೀಡಿದೆ. ವಿಚಾರಣೆಯನ್ನ ನವೆಂಬರ್ 7 ಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಹೈಕೋರ್ಟ್ ​ನ ಮಧ್ಯಂತರ ತಡೆ ತೆರವು ಕೋರಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿದೆ.

Related posts

NPS ರದ್ದು OPS ಜಾರಿಗೆ ಪ್ರಕ್ರಿಯೆ ಆರಂಭ..

ಭಾರತದಲ್ಲಿವೆ ಚೀನಾಕ್ಕಿಂತ ‘ಐದು ಪಟ್ಟು ಹೆಚ್ಚು ಶಾಲೆಗಳು…

ಸೆ.3 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ.